ಕನ್ನಡ ರಾಜ್ಯೋತ್ಸವ ಹಿನ್ನೆಲೆ ಮಸ್ಕಿ ಪಟ್ಟಣ ಕೆಂಪು - ಹಳದಿ ಮಯ

 

ಮಸ್ಕಿ : ಕನ್ನಡ ನಾಡು ಅಥವಾ ಕರ್ನಾಟಕ ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಹಾಗೇಯೇ ಈ ವರ್ಷ ಪಟ್ಟಣವೂ ಮೊಟ್ಟ ಮೊದಲ ಬಾರಿಗೆ ಕೆಂಪು - ಹಳದಿಮಯ.ಕನ್ನಡ ರಾಜ್ಯೋತ್ಸವ ಆಚರಣೆ ದಿನದಂದು ಕನ್ನಡಾಂಬೆಯ ಫೋಟೊ ಇಟ್ಟು ಪೂಜೆ ಸಲ್ಲಿಸಲಾಗುತ್ತದೆ. ಶಾಲಾ–ಕಾಲೇಜುಗಳಲ್ಲಿ ಧ್ವಜಾರೋಹಣದ ಜೊತೆಗೆ ಕನ್ನಡಕ್ಕೆ ಸಂಬಂಧಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತದೆ. ಸಂಘ–ಸಂಸ್ಥೆಗಳು, ಕಚೇರಿಗಳಲ್ಲಿ ಕನ್ನಡಾಂಬೆಯ ಫೋಟೊ ಇಟ್ಟು ಪೂಜೆ ಮಾಡಲಾಗುತ್ತದೆ. ಮೆರವಣಿಗೆಗಳನ್ನು ಮಾಡುವ ಮೂಲಕ ಕನ್ನಡಾಭಿಮಾನ ಮೆರೆಯುತ್ತಾರೆ.

ಈ ಬಾರಿಯೂ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಕನ್ನಡಪರ ಸಂಘಟನೆಗಳು ಕನ್ನಡ ಅಭಿಮಾನಿಗಳು ಹಾಗೂ ತಾಲೂಕ ಆಡಳಿತ ಪುರಸಭೆ ಸಹಯೋಗದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕನ್ನಡದ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕನ್ನಡ ಬಾವುಟಗಳಿಂದ ಮಧುವಣ ಗಿತ್ತಿಯಂತೆ ಮಸ್ಕಿ ಯನ್ನು ಶೃಂಗಾರ ಗೊಳಿಸಲಾಗಿದ್ದು, ತಾಲೂಕ ಆಡಳಿತ ಹಾಗೂ ಪುರಸಭೆಯೂ ಕನ್ನಡ ಅಭಿಮಾನಕ್ಕೆ ಸಾರ್ವಜನಿಕರಿಂದ ಹಾಗೂ ಕನ್ನಡ ಸಂಘಟನೆಗಳು, ಕನ್ನಡ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ