ಹಿರೇನಗನೂರಿನ ಸಹಿಪ್ರಾ ಶಾಲೆಯಲ್ಲಿ ಮಹಾತ್ಮ ಗಾಂಧಿ.ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ.ಅವರ ಜಯಂತಿ ಆಚರಣೆ.
ಹಟ್ಟಿ ಚಿನ್ನದ ಗಣಿ,ಹಟ್ಟಿ ಪಟ್ಟಣ ಸಮೀಪದ ಹಿರೇನಗನೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಹಾತ್ಮ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯನ್ನು ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಮಹಾತ್ಮಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮ ನೆರವೇರಿಸಿದರು.
ಕಾರ್ಯಕ್ರಮವನ್ನು ಕುರಿತು ನಿಂಗಪ್ಪ ಹುಬ್ಬಳ್ಳಿ ಮಾತನಾಡಿ. ಗಾಂಧೀಜಿಯವರ ಜೀವನ ಅವರ ತತ್ವಗಳ ಬಗ್ಗೆ ಹಾಗೂ ಶಾಸ್ತ್ರೀಯವರ ಸರಳತೆ ಕುರಿತು ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ಮುದ್ದು ಮಕ್ಕಳು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ.ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ.ಅವರ ಬಗ್ಗೆ ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ದೈಹಿಕ ಶಿಕ್ಷಕರಾದ ಎಸ್ ಎಫ್ ಫಾತಿಮಾ ಅವರು ಸರ್ವಧರ್ಮ ಪ್ರಾರ್ಥನೆಯನ್ನು ಹಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಮುಖ್ಯ ಗುರುಗಳಾದ ಶ್ರೀಮತಿ ಮಮತಾ ರವರು ಮತ್ತು ಮುಖ್ಯ ಅತಿಥಿಗಳಾಗಿ ಶಿಕ್ಷಣ ಪ್ರೇಮಿಗಳ ಶೀ ಮೌನುದ್ದೀನ್ ಬೂದಿನಾಳ.ಹಾಗೂ ಶಿಕ್ಷಕರು ಮುದ್ದು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ