ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ 27 ರಂದು 3ನೇ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ.
ಲಿಂಗಸಗೂರು:26 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸಂಸ್ಥಾಕರ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ಆದೇಶದಂತೆ.ಇದೇಂಬರ್27 ಬುಧುವಾರದಂದು ಲಿಂಗಸುಗೂರಿನ ಶಂಕರ್ ರೆಡ್ಡಿ ಕಲ್ಯಾಣಮಂಟಪದಲ್ಲಿ 3ನೇ ಜಿಲ್ಲಾ ಪತ್ರಕರ್ತರ ಸಮ್ಮೇಳನ ಹಾಗೂ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ಪ್ರಪ್ರಥಮ ಬಾರಿಗೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿಗೆ ಆಗಮಿಸಿದ ಸುಪ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯ ಮೂರ್ತಿಗಳಾದ ಸಂತೋಷ್ ಹೆಗಡೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತ ದ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾ ರ್ಜುನ, ಅವರು ಭಾಗವಹಿಸಿದ್ದರು.
ಇದೇ ವೇಳೆ ನಾಯಮೂರ್ತಿಗಳಾದ ಶ್ರೀ ಸಂತೋಷ್ ಹೆಗ್ಡೆ ವಿದ್ಯಾರ್ಥಿಗಳು ಶಾಲಾ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಿವಿಧ ಕಲಾ ತಂಡಗಳು ವೇದಿಕೆಯನ್ನು ರಂಜಿಸಲು ಆಗಮಿಸಲಿವೆ. ತಾಲೂಕಿನ ಜನ ಪ್ರತಿನಿಧಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಯಚೂರು ಜಿಲ್ಲೆಯ ಪ್ರತಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ.ಕನಿಪ ಸಂಘಟನೆಯ ಪತ್ರಕರ್ತರ ಮಟ್ಟದ ಧ್ವನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಲಿಂಗಸಗೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಟನೆಯ ಜಿಲ್ಲಾ ಪತ್ರಕರ್ತರ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಕಟಿಸಿದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ