ಸಿ.ಪಿ. ಯೋಗೇಶ್ವರ್ ವಿರುದ್ಧ ಕೌಟುಂಬಿಕ ವಿಚಾರವಾಗಿ , ಮೊದಲ ವಿಚ್ಛೇದಿತ ಪತ್ನಿಯ ಪುತ್ರಿ ನಿಶಾ ಅವರು ಬಳಸುತ್ತಿರುವ ಫೇಸ್ ಬುಕ್, ಇನ್‌ಸ್ಟಾಗ್ರಾಂ, ಎಕ್ಸ್‌ ಕಾರ್ಪ್‌ (ಟ್ವಿಟರ್‌), ಗೂಗಲ್‌ ಮತ್ತು ಯೂಟ್ಯೂಬ್‌ ಖಾತೆಯನ್ನು ಸಂಪೂರ್ಣವಾಗಿ ಡಿಲೀಟ್ ಮಾಡಲು ಹೈಕೋರ್ಟ್ ಆದೇಶ ನೀಡಿದೆ

 ಬೆಂಗಳೂರು, ನ,7: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ವಿರುದ್ಧ ಅವರ ಮೊದಲ ವಿಚ್ಛೇದಿತ ಪತ್ನಿಯ ಪುತ್ರಿ ನಿಶಾ ಅವರು ಬಳಸುತ್ತಿರುವ ಫೇಸ್ ಬುಕ್, ಇನ್‌ಸ್ಟಾಗ್ರಾಂ, ಎಕ್ಸ್‌ ಕಾರ್ಪ್‌ (ಟ್ವಿಟರ್‌), ಗೂಗಲ್‌ ಮತ್ತು ಯೂಟ್ಯೂಬ್‌ ಖಾತೆಯನ್ನು ಸಂಪೂರ್ಣವಾಗಿ ಡಿಲೀಟ್ ಮಾಡಲು ಹೈಕೋರ್ಟ್ ಆದೇಶ ನೀಡಿದೆ.

ಯೋಗೇಶ್ವರ್‌ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ರಾಜ್ಯ ಹೈಕೋರ್ಟ್‌ ನಿರ್ಬಂಧಿಸಿದೆ. 

ಸಾಮಾಜಿಕ ಜಾಲತಾಣಗಳು ಕೌಟುಂಬಿಕ ವಿಚಾರಗಳನ್ನು ಪೋಸ್ಟ್ ಮಾಡಬಾರದು‌ ಎಂದು ಹೇಳಿದೆ.

ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಪತ್ನಿ ಪಿ ವಿ ಶೀಲಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರ ನೇತೃತ್ವದ ಏಕಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. 

ಪತಿ ಸಿ ಪಿ ಯೋಗೇಶ್ವರ್ ಉಪ ಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ಮಲಮಗಳಾದ ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿಯಾದ ಮಾನಹಾನಿಕರ, ಆಧಾರರಹಿತ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಅರ್ಜಿದಾರರ ಪರ ವಕೀಲರಾದ ನಾಗರಾಜ ಶೆಟ್ಟಿ ಮತ್ತು ರೆಹಮತ್ ಉನ್ನೀಸಾ ವಾದ ಮಂಡಿಸಿದ

ಅರ್ಜಿಯ ಮಧ್ಯಂತರ ಮನವಿಯನ್ನು ಪರಿಗಣಿಸಿರುವ ಹೈಕೋರ್ಟ್, ಪ್ರತಿವಾದಿಗಳಾದ ನಿಶಾ ಅವರು ಬಳಸುತ್ತಿರುವ ಫೇಸ್ ಬುಕ್, ಇನ್‌ಸ್ಟಾಗ್ರಾಂ, ಎಕ್ಸ್‌ ಕಾರ್ಪ್‌ (ಟ್ವಿಟರ್‌), ಗೂಗಲ್‌ ಮತ್ತು ಯೂಟ್ಯೂಬ್‌ ಖಾತೆಯನ್ನು ಸಂಪೂರ್ಣವಾಗಿ ಡಿಲೀಟ್ ಮಾಡಲು ಹೈಕೋರ್ಟ್ ಆದೇಶ ನೀಡಿದೆ.

 ಜಾಲತಾಣಗಳಲ್ಲಿ ಯೋಗೇಶ್ವರ್‌ ಅವರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ಅಪ್‌ಲೋಡ್‌ ಮಾಡಬಾರದು ಮತ್ತು ಈಗಾಗಲೇ ಪ್ರಸಾರ ಮಾಡಲಾಗಿರುವ ತುಣಕುಗಳನ್ನು ಅಳಿಸಿಹಾಕಬೇಕು ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆ ಮುಂದೂಡಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ