“ವಿಶ್ವಕರ್ಮರು ಒಂದಾದರೆ ರಾಜ್ಯದಲ್ಲಿಯೇ ಅತಿ ದೊಡ್ಡ ಶಕ್ತಿಯಾಗಿ ಬೆಳೆಯಲು ಸಾಧ್ಯ” ಬಿ.ಎಂ.ಉಮೇಶ್ ಕುಮಾರ್
ಉಡುಪಿ : ವಿಶ್ವಕರ್ಮರು ಒಂದಾದರೆ ರಾಜ್ಯದಲ್ಲಿಯೇ ಅತಿ ದೊಡ್ಡ ಶಕ್ತಿಯಾಗಿ ಬೆಳೆಯಲು ಸಾಧ್ಯ” ಎಂದು ಸಹಕಾರ ರತ್ನ, ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
ಉಡುಪಿ ಜಿಲ್ಲೆ ಬಾರಕೂರು ಕ್ಷೇತ್ರದ ಪ್ರಸಿದ್ಧ ಶ್ರೀ ಕಾಳಿಕಾಂಬಾ ದೇವಸ್ಥಾನದವರು "ರಂಗಪೂಜಾದಿ ದೀಪೋತ್ಸವ"ದ ಅಂಗವಾಗಿ ನವೆಂಬರ್ 28 ರಂದು ಆಯೋಜಿಸಿದ್ದ ವಿಶೇಷ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ ಈ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.
“ರಾಜ್ಯದಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ ವಿಶ್ವಕರ್ಮ ಸಮುದಾಯದ ಜನರಿದ್ದಾರೆ. ಹಿಂದುಳಿದ ವರ್ಗಗಳಲ್ಲಿ ಎರಡನೇ ಅತಿ ದೊಡ್ಡ ಸಮುದಾಯ ನಮ್ಮದು. ನಮ್ಮಲ್ಲಿ 40ಕ್ಕೂ ಹೆಚ್ಚು ಉಪಪಂಗಡಗಳಿವೆ. ನಮ್ಮಲ್ಲಿರುವ ಎಲ್ಲ ಉಪಪಂಗಡಗಳು, ಎಲ್ಲ ಪ್ರದೇಶದಲ್ಲಿರುವ ವಿಶ್ವಕರ್ಮರು ಒಂದಾದರೆ ರಾಜ್ಯದಲ್ಲಿಯೇ ಅತಿ ದೊಡ್ಡ ಶಕ್ತಿಯಾಗಿ ನಾವು ಹೊರಹೊಮ್ಮುತ್ತೇವೆ. ನಮ್ಮ ಸಮುದಾಯ ದೊಡ್ಡ ಶಕ್ತಿಯಾಗಿ ಬೆಳೆದಾಗ ಸರ್ಕಾರಿ ಮಟ್ಟದಲ್ಲಿ ನಮ್ಮ ಬೇಡಿಕೆಗಳಿಗೆ ಬಹುಬೇಗ ಸ್ಪಂದನೆ ದೊರೆಯುತ್ತದೆ.” ಎಂದು ಅವರು ಅಭಿಪ್ರಾಯಪಟ್ಟರು.
ಈ ಧಾರ್ಮಿಕ ಕಾರ್ಯಕ್ರಮದ ದಿವ್ಯ ನಾನಿದ್ಯವನ್ನು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ವಹಿಸಿ ಆಶೀರ್ವಚನ ನೀಡಿದರು
ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ ಆಡಳಿತ ಧರ್ಮದರ್ಶಿ ಶ್ರೀ ವಿ. ಶ್ರೀಧರ ಆಚಾರ್ಯ ಹಾಗೂ ಪದಾಧಿಕಾರಿಗಳು ಹಾಗೂ ಸಹಸ್ರಾರು ಭಕ್ತಾದಿಗಳು ಉಪಸ್ಥಿತರಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ