ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಮಾವೇಶ
ಮಸ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಮಸ್ಕಿ ತಾಲ್ಲೂಕು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ತಾಲ್ಲೂಕಿನ ಭ್ರಮರಂಭಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು.
ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎಮ್ ಅಮರೇಶರವರು ಉದ್ಘಾಟಿಸಿ ಶುಭ ಹಾರೈಸಿ ನಂತರ ಮಾತನಾಡಿದರು.ಶ್ರೀಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳೆಯರನ್ನು ಸ್ವಾವಲಂಭಿಯನ್ನಾಗಿಸಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ನಾಡಿನಾದ್ಯಂತ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿರುವುದನ್ನು ಕಂಡು ಸಹಿಸದ ಕೆಲವು ಪಟ್ಟಭದ್ರರು. ಯೂಟೂಬ್‍ನಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರಹೆಗಡೆರವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಹೋರಾಟದ ಮೂಲಕ ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ನಮ್ಮ ಸಂಸ್ಥೆಯು ಗ್ರಾಮಾಭಿವೃದ್ಧಿ ಎಂಬ ಕಾರ್ಯಕ್ರಮದ ಮೂಲಕ ಅಂಗವಿಕಲರಿಗೆ ಮಾಶಾಸನ, ವಿದ್ಯಾರ್ಥಿವೇತನ, ನಿರಾಶ್ರಿತರಿಗೆ ವಾತ್ಸಲ್ಯ ಮನೆ ಕಟ್ಟಿಸಿಕೊಡುವುದು, ವಯೋವೃದ್ದರಿಗೆ ವಾಟರ್‍ಬೆಡ್ ಇನ್ನಿತರೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ. ಸ್ವಸಹಾಯ ಸಂಘಗಳ ಮಹಿಳೆಯರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದುಪಯೋಗಪಡಿಸಿಕೊಂಡು ಜೀವನ ಮಟ್ಟ ಸುಧಾರಿಸಿಕೊಂಡಿದ್ದಾರೆಂದು ಹೇಳಿದರು.
ನಂತರ ಮಾನ್ಯ ಜಿಲ್ಲಾ ನಿರ್ದೇಶಕರಾದ ಮೋಹನ್ ನಾಯಕ್ ಯವರು ಸ್ವ ಸಹಾಯ ಸಂಘಗಳ ಬಲವರ್ಧನೆ ಶಿಸ್ತು ಬದ್ಧ ವ್ಯವಹಾರ ಬಡ್ಡಿ ದರ, PRK ಬಗ್ಗೆ, ಮಾಸಿಕ ವರದಿ ಮರುಪಾವತಿ ಚೀಟಿ ಬಗ್ಗೆ, ಲಾಭಾಂಶ ಹಂಚಿಕೆ, ವಾರದ ಕಂತಿನ ಪ್ರಯೋಜನ, ಸಮುದಾಯ ಕಾರ್ಯಕ್ರಮ ಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಕಾರ್ಯಕ್ರಮದ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ರವರ ಹಾಗೂ ಪರಮಪೂಜ್ಯ ಪದ್ಮವಿಭೂಷಣ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಬಗೆ ಮತ್ತು ನಡೆದು ಬಂದ ಹಾದಿಯ ಬಗ್ಗೆ ಅರ್ಥಗರ್ಭಿತ ವೀಡಿಯೋ ಕ್ಲಿಪ್ ಅನ್ನು ಪ್ರೊಜೆಕ್ಟರ್ ಮೂಲಕ ತೋರಿಸಿದರು. ನಂತರ ಕಾರ್ಯಕ್ರಮದ ಕುರಿತು ಅನಿಸಿಕೆಯನ್ನು ಕೇಳಲಾಯಿತು.
ಇದೇ ಸಂದರ್ಭದಲ್ಲಿ ಮಸ್ಕಿ ತಾಲೂಕ ಯೋಜನಾಧಿಕಾರಿ ಶಾಲಿನಿ, ಐ.ಡಿ.ಬಿ.ಐ ಸಿಬ್ಬಂದಿಗಳಾದ ಬಶೀರ್, ಸುದೀಪ್, ಮಸ್ಕಿ ತಾಲೂಕಿನ 8 ವಲಯದ 71 ಒಕ್ಕೂಟಗಳು 355 ಮಂದಿ ಪದಾಧಿಕಾರಿಗಳು ಮತ್ತು ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು ಸೇವಾಪ್ರತಿನಿಧಿಗಳು ಸಿ.ಎಸ್.ಸಿ ಸೇವಾದಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ