ಶಿವಪುತ್ರಪ್ಪ ಜಾಲಹಳ್ಳಿ ರವರಿಗೆ ಕರ್ನಾಟಕ"ರತ್ನಶ್ರೀ"ಪ್ರಶಸ್ತಿ.

 

ಜಾಲಹಳ್ಳಿ:ಬೆಂಗಳೂರು ಸ್ನೇಹ ಯುವ ಸಾಂಸ್ಕೃತಿಕ ಸಂಘ (ರಿ)ಬೆಂಗಳೂರು ಇವರು ನೀಡುವ ವಾರ್ಷಿಕ ಪ್ರಶಸ್ತಿ ಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಸಾಧಕರಿಗೆ ನೀಡುವ ಕರ್ನಾಟಕ ರತ್ನ ಶ್ರೀ ಪ್ರಶಸ್ತಿ ಗೆ ಭಾಜನರಾಗಿದ್ದರು ಶ್ರೀಯುತರಿಗೆ ತಮ್ಮ ಜವಾಬ್ದಾರಿಯನ್ನು ಮತ್ತಷ್ಟು ಎಚ್ಚಿಸಿದೆ ಎಂದರೆ ಅತಿಶಯೋಕ್ತಿ ಆಗಲಾರದು.

ಬೆಂಗಳೂರಿನ ರಾಜಾಜಿನಗರದ ಯಕ್ಷಿತ್ ರಾಯಲ್ ಅಕಾಡೆಮಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಡೆದ ಬಾರಿಸು ಕನ್ನಡ ಡಿಂಡಿಮವ ಕಾರ್ಯಕ್ರಮದಲ್ಲಿ ಶ್ರೀ ಶಿವಪುತ್ರಪ್ಪ ಇವರಿಗೆ ಕರ್ನಾಟಕ ರತ್ನ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಶಿವಪುತ್ರಪ್ಪ ಇವರು.ಸಮೀಪದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಮರಡಿಯಲ್ಲಿ ಕಾರ್ಯ ನಿರ್ವಹಿಸುತ್ತ ಸರಕಾರಿ ಸೇವೆಯಲ್ಲಿ ಸುಧೀರ್ಘ 35 ವರ್ಷಗಳ ಕಾಲ ತಮ್ಮ ಜೀವನ ಪಯಣ ನಡೆಸಿ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ವಿವಿಧ ಜವಾಬ್ದಾರಿಗಳಾದ ಸಿ ಆರ್ ಪಿ,ತಾಲೂಕ ಪಂಚಾಯತನಲ್ಲಿ ಕಲಾ ಜಾತಾ ನಾಯಕರಾಗಿ, ವಯಸ್ಕ ಶಿಕ್ಷಣ ಕೇಂದ್ರದ ತಾಲೂಕ ನೋಡಲ್ ಅಧಿಕಾರಿಯಾಗಿ ಹೀಗೆ ಹತ್ತು ಹಲವು ಹುದ್ದೆಗಳನ್ನು 

ಸಮರ್ಥವಾಗಿ ನಿಭಾಯಿಸಿದ ಸೈ ಎನಿಸಿಕೊಂಡಿದ್ದಾರೆ. ಪ್ರಸ್ತುತ ಹಿರಿಯ ಬಡ್ತಿ ಮುಖ್ಯೋಪಾಧ್ಯಾಯರಾಗಿ ಸ ಮಾ.ಹಿ ಪ್ರಾ ಶಾಲೆ ಸೋಮನಮರಡಿ ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಅವರ ಮುಂದಿನ ವೃತ್ತಿ ಜೀವನ ಸುಖಕರವಾಗಿರಲಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳು ಹರಸಿ ಬರಲೆಂದು ಹಾರೈಸುವ ಶಿಷ್ಯ ಬಳಗ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ