ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ.19 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳ : ಡಾ. ಮಹಾಂತಗೌಡ ಪಾಟೀಲ್

 

ಮಸ್ಕಿ : ಪಟ್ಟಣದ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಡಿ.19 ಗುರುವಾರ ದಂದು ಬೆಳಿಗ್ಗೆ 10 ಗಂಟೆಯಿಂದ 3 ಗಂಟೆಗೆ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC CELL) ಮತ್ತು ಉದ್ಯೋಗ ಭರವಸಾ ಕೋಶ (PLACEMENT CELL) ಹಾಗೂ ಕರಾವಳಿ ಟೀಚರ್ಸ್ ಹೆಲ್ಪ್ ಲೈನ್ ಇವರುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಡಾ. ಮಹಾಂತಗೌಡ ಪಾಟೀಲ್ ಪತ್ರಿಕೆ ಮೂಲಕ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ SSLC,PUC,NTC,D.Ed, B.Ed,B,PED,BA,B.COM,MA, M.COM,M.SC,BSW,MSW, MA,MBA,BBA,BCA,ITI, DIPLOMA,PHARMACY,BE, M,TECH ಮುಂತಾದ ಪದವಿಗಳನ್ನು ಪಡೆದಿರುವ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ನೇರ ಸಂದರ್ಶನದ ಮೂಲಕ ಪ್ರತಿಷ್ಠಿತ ಶಾಲಾ ಕಾಲೇಜುಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಹಾಗೂ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ನೇರ ನೇಮಕವಾಗುವ ಸುವರ್ಣಾವಕಾಶ ಇದಾಗಿದೆ.

ನಮ್ಮ ಕಾಲೇಜಿನ ಹಳೆಯ ಹಾಗೂ ಈಗಿರುವ ವಿದ್ಯಾರ್ಥಿಗಳಷ್ಟೇ ಅಲ್ಲದೆ ಅರ್ಹ ಯಾವುದೇ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾಗಿರುವ ಡಾ,ಮಹಾಂತಗೌಡ ಪಾಟೀಲ್ ಪತ್ರಿಕಾ ಪ್ರಕಟಣೆಯ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕರೆಕೊಟ್ಟಿದ್ದಾರೆ.

ಮೇಳಕ್ಕೆ ಆಗಮಿಸುವ ಆಕಾಂಕ್ಷಿಗಳು 10 ಪ್ರತಿಗಳಲ್ಲಿ ತಮ್ಮ ಸ್ವವಿವರ ಉಳ್ಳ ಪ್ರಮಾಣಪತ್ರ,ವಿದ್ಯಾರ್ಹತೆಯ ಪ್ರಮಾಣಪತ್ರಗಳು,ಆಧಾರ್ ಕಾರ್ಡ್,ಪ್ಯಾನ್ ಕಾರ್ಡ್,ಗಳ ಝರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.

ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕ ಹಾಗೂ ಉದ್ಯೋಗ ಬರವಸಾ ಕೋಶದ ಸಂಚಾಲಕರೂ ಆಗಿರುವ ಯಾಳಗಿ ಶ್ರೀನಿವಾಸ,ಮತ್ತು ಆಂತರಿಕ ಗುಣಮಟ್ಟ ಬರವಸಾ ಕೋಶದ ಸಂಚಾಲಕರು ಹಾಗೂ ಸಹಾಯಕ ಪ್ರಾಧ್ಯಾಪಕರಾಗಿರುವ ರೋಹಿಣಿಮೂರ್ತಿ ಈ ಉದ್ಯೋಗ ಮೇಳದ ಉಸ್ತುವಾರಿಯನ್ನು ವಹಿಸಲಿದ್ದಾರೆ.

ಜೊತೆಗೆ ನಮ್ಮ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು,ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ವಿವಿದ ಜವಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ಇದರ ಸದುಪಯೋಗ ಸರ್ವ ಪದವಿಧರ ನಿರುದ್ಯೋಗಿಗಳು ಸದುಪಯೋಗಪಡೆದುಕೊಳ್ಳಬೇಕೆದು ಪತ್ರಿಕೆ ಮೂಲಕ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*