*ತಾಹಶೀಲ್ದಾರರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಭಾರತ ಕಮ್ಯುನಿಸ್ಟ್ ಪಕ್ಷ ಕೊಟ್ಟೂರು ತಾಲೂಕು ಮಂಡಳಿ*
ಕೊಟ್ಟೂರು:- ಅದಾನಿ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಲು ಒತ್ತಾಯಿಸಿ, ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ, ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದನ್ನು ತಡೆಗಟ್ಟಲು ಒತ್ತಾಯಿಸಿ, ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಆಡಳಿತವನ್ನು ಖಂಡಿಸಿ ವಿಶ್ವ ಮಾನವ ಹಕ್ಕುಗಳ ದಿನವಾದ ಡಿಸೆಂಬರ್ 10 ರಂದು ಕೊಟ್ಟೂರು ತಹಶಿಲ್ದಾರ ಅಮರೇಶ್ ಜಿಕೆ ಅವರ ಮುಖಾಂತರ ಕಾರ್ಯಕರ್ತರ ಸಮ್ಮುಖದಲ್ಲಿ ಕೊಟ್ಟೂರು ತಾಲೂಕು ಸಹ ಕಾರ್ಯದರ್ಶಿ ಕೆ.ಕೊಟ್ರೇಶ ಮನವಿಯನ್ನು ಸಲ್ಲಿಸಿದರು.
ಆಡಳಿತ ನಡೆಸಲು ಬೇಕಾದ ಸರಳ ಬಹುಮತಗಳನ್ನು ಪಡೆಯಲಾಗದ ಬಿಜೆಪಿ ಇತರೆ ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ ಮೂರನೇ ಬಾರಿಗೆ ಅಧಿಕಾರದಲ್ಲಿ ಮುಂದುವರಿದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾತಂತ್ರ ವಿರೋಧಿ ಆಡಳಿತವನ್ನು ಮುಂದುವರಿಸಿದೆ. ದೇಶದಲ್ಲಿ ರೈತ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮುಖ್ಯತೆ ನೀಡದೆ ಆದಾನಿ ಅಂಬಾನಿಯಂತಹ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿಯೇ ಅಧಿಕಾರ ಬಳಕೆಯಾಗುತ್ತಿದೆ.
ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು ದೇಶದ ಜಿಡಿಪಿ ನಿರಂತರವಾಗಿ ಕುಸಿಯುತ್ತಿದೆ. ನಿರುದ್ಯೋಗಿಗಳ ಸಂಖ್ಯೆಯು ದಿನೇ ದಿನೇ ಹೆಚ್ಚುತ್ತಿದ್ದು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಸಂಕಳ್ಳದಲ್ಲಿಯೇ ಬದುಕು ನಡೆಸುವಂತಾಗಿದೆ. ಸಂವಿಧಾನದ ಬಹುತ್ವದ ಆಶಯಗಳಿಗೆ ವಿರುದ್ಧವಾಗಿ ಏಕತ್ವದ ಪ್ರತಿಪಾದನೆ ಮುಂದುವರಿಸಿರುವ ಮೋದಿ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಲಿರುವ 'ಒಂದು ದೇಶ ಒಂದು ಚುನಾವಣೆ' ಎಂಬ ವಿಳಯವನ್ನು ಪದೇ ಪದೇ ಮುನ್ನೆಲೆಗೆ ತರುತ್ತಿದೆ. ಮಣಿಪುರ, ಉತ್ತರ ಪ್ರದೇಶಗಳು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಜಾತಿ ಜನಾಂಗೀಯ ಸಂಘರ್ಳಗಳು, ಕೋಮು ಭಾವನೆ ಕೆರಳಿಸಿ ಹಿಂಸಾಚಾರಗಳು ಭುಗಿಲೇಳುತ್ತಿದ್ದರೂ ಶಾಂತಿ ಸೌಹಾರ್ದತೆ ಬಲಪಡಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಮಾನವ ಹಕ್ಕುಗಳ ದಿನವಾದ ಇಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ದೇಶಾದ್ಯಂತ ಪ್ರತಿಭಟನಾ ದಿನವಾಗಿ ಆಚರಿಸಲು ಕರೆ ನೀಡಿದ್ದು ಈ ಕೆಳಗಿನ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸುತ್ತದೆ.
1) ಆದಾನ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ಸಮಗ್ರ ತನಿಖೆ ನಡೆಸಿ: ಗೌತಮ್ ಆದಾನ ತಮ್ಮ ಸಂಸ್ಥೆಯ ಪರವಾಗಿ ವ್ಯಾಪಾರ ವಹಿವಾಟು ಒಪ್ಪಂದ ಮಾಡಿಕೊಳ್ಳಲು ಭಾರತದ ಸರ್ಕಾರಿ ಅಧಿಕಾರಿಗಳು
ಸೇರಿದಂತೆ ಹಲವರಿಗೆ ಸಾವಿರಾರು ಕೋಟಿ ರೂಪಾಯಿ ಲಂಚ ನೀಡಿದ್ದಾರೆಂದು ಅಮೆರಿಕಾದ ಪ್ರಾಸಿಕ್ಯೂಟರ್ಗಳು ಗಂಭೀರ ಸ್ವರೂಪದ ಆರೋಪ ಮಾಡಿದ್ದಾರೆ. ಲಾಭದಾಯಕವಾದ ಸೌರಶಕ್ತಿಯ ಪೂರೈಕೆಯಂತಹ ಉದ್ದಿಮೆಗಳನ್ನು ಗುತ್ತಿಗೆ ಪಡೆಯಲು ಸಾವಿರಾರು ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂಬ ನ್ಯೂಯಾರ್ಕ್ ಪ್ರಾಸಿಕ್ಯೂಟರ್‌ಗಳ ದೋಳಾರೋಪಣೆಗಳ ಸತ್ಯಾಸತ್ಯತೆಯನ್ನು ಅರಿಯಲು ಹಾಗೂ ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರ ಸೇರಿದಂತೆ ಸಮಗ್ರ ತನಿಖೆ ನಡೆಸಲು ಸಂಸತ್ತಿನ ಜಂಟಿ ಸಂಸದೀಯ ಸಮಿತಿಯನ್ನು ರಚಿಸಿ (ಜೆಪಿಸಿ) ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಿಪಿಐ ಆಗ್ರಹಪಡಿಸುತ್ತದೆ.
2) ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹ: ಮಣಿಪುರದಲ್ಲಿ ಮೈತೆಯಿ ಮತ್ತು ಕುಕ್ಕಿ ಸಮುದಾಯಗಳ ನಡುವೆ ನಿರಂತರವಾಗಿ ನಡೆಯುತ್ತಿರುವ ಜನಾಂಗೀಯ ಸಂಘರ್ಭವನ್ನು ತಡೆದು ಶಾಂತಿ ಸ್ಥಾಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜನಾಂಗೀಯ ಸಂಘರ್ಳದಲ್ಲಿ ಅಪಾರ ಸಂಖ್ಯೆಯ ಸಾವು ನೋವುಗಳು ಸಂಭವಿಸುತ್ತಿದ್ದು ಸುಮಾರು 60 ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತರು ಕಳೆದ ಒಂದು ವರ್ಷಕ್ಕಿಂತಲೂ
ಹೆಚ್ಚು ನಿರಾಶ್ರಿತರ ಶಿಬಿರದಲ್ಲಿ ತಂಗುವಂತಹ ದಾರುಣ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮಣಿಪುರದಲ್ಲಿ ಶಾಂತಿ ನೆಲೆಸಲು ಅನುಕೂಲವಾಗುವಂತೆ ಅಲ್ಲಿನ ಪರಿಸ್ಥಿತಿಯ ಕುರಿತು ಸಂಸತ್ತಿನಲ್ಲಿ ಚರ್ಚಿಸಬೇಕು ಹಾಗೂ ಮಣಿಪುರದಲ್ಲಿ ಹೇರಲಾಗಿರುವ ಸಶಸ್ತ್ರ ಪಡೆಗಳ ವಿಶೇಳ ಅಧಿಕಾರ ಕಾಯ್ದೆಯನ್ನು (AFSPA) ಹಿಂಪಡೆದು ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಸಿಪಿಐ ಒತ್ತಾಯಿಸುತ್ತದೆ.
3) ಕೋಮು ಭಾವನೆ ಕೆರಳಿಸುವ ಕೃತ್ಯಗಳನ್ನು ತಡೆಗಟ್ಟುವಂತೆ ಆಗ್ರಹಿಸಿ: ಉತ್ತರಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುವಂತಹ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಮಸೀದಿ ಮಂದಿರಗಳ ವಿವಾದ ಕೇಂದ್ರವಾಗಿಸಿ ಧಾರ್ಮಿಕ ಸಾಮರಸ್ಯವನ್ನು ಹಾಳುಗೆಡುವಲು ಕೋಮುವಾದಿ ಶಕ್ತಿಗಳು ನಿರತವಾಗಿವೆ. ಪ್ರಚೋದನಕಾರಿ ಹೇಳಿಕೆಗಳ ಮೂಲಕ ಶಾಂತಿ ಸೌಹಾರ್ದತೆಯನ್ನು ಕದಡುವಂತಹ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಿವೆ. ಕೋಮು ಭಾವನೆ ಕೆರಳಿಸುವ ಕೃತ್ಯಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಜರುಸಬೇಕೆಂದು ಸಿಪಿಐ ಆಗ್ರಹಿಸುತ್ತದೆ.
4) ಬೆಲೆ ಏರಿಕೆ ತಡೆಗಟ್ಟಿ ನಿರುದ್ಯೋಗ ಸಮಸ್ಯೆ ಪರಿಹರಿಸಿ: ದೇಶದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಜನಪರವಾದ ಆರ್ಥಿಕ ಧೋರಣೆ ಹಾಗೂ ಔದ್ಯಮಿಕ ನೀತಿಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಬಣಿಸುತ್ತಿದೆ. ಜನಸಾಮಾನ್ಯರು ದಿನನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯು ಜನರ ಬದುಕನ್ನು ದುಸ್ತರಗೊಳಿಸಿದೆ. ಬೆಲೆ ಏರಿಕೆಯನ್ನು ತಡೆಗಟ್ಟಿ ನಿರುದ್ಯೋಗ ಸಮಸ್ಯೆ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಪಿಐ ಒತ್ತಾಯಿಸುತ್ತದೆ
ಈ ಮೇಲಿನ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಂವಿಧಾನದ ಆಶಯಗಳಿಗನುಗುಣವಾಗಿ ಮಾನವ ಹಕ್ಕುಗಳನ್ನು ರಕ್ಷಿಸಲು ಮುಂದಾಗಬೇಕೆಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ತಾಲೂಕು ಸಹ ಕಾರ್ಯದರ್ಶಿ ಕೆ ಕೊಟ್ರೇಶ್,ಪಿ ಚಂದ್ರಶೇಖರ್,ಅಂಜನಿ ಎಲ್, ಮಂಜುನಾಥ್ ಭಜಂತ್ರಿ,ಚೆನ್ನ್, ಪ್ರಕಾಶ್, ಇತರರು ಇದ್ದರು


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ