ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಪ್ರಯೋಗ ಖಂಡಿಸಿ ಮಸ್ಕಿ ಪಟ್ಟಣದಲ್ಲಿ ಪ್ರೊಟೆಸ್ಟ್...!

 

ಮಸ್ಕಿ : ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ದುರುದ್ದೇಶದಿಂದ ಚಳುವಳಿ ನಿರತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿನೆ.

ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಹತ್ತಿರ ಚನ್ನಮ್ಮ ವೃತದಲ್ಲಿ ಮಸ್ಕಿ ತಾಲ್ಲೂಕು ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 

ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲವೆಂಬಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಕೂಡಲೇ ಪಂಚಮಸಾಲಿ ಸಮಾಜದ ಕ್ಷಮೆ ಯಾಚಿಸಿ, ದಬ್ಬಾಳಿಕೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರ್ ಮೂಲಕ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ, ಪಂಚಮಸಾಲಿ ಸಮಾಜದ ಪ್ರಮುಖ ಮುಖಂಡರು ಯುವಕರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*