ಮನಮೋಹನ್ ಸಿಂಗ್ ನಿಧನಕ್ಕೆ ಆರ್.ಸಿದ್ದನಗೌಡ ಸಂತಾಪ
ಮಸ್ಕಿ : ಹತ್ತು ವರ್ಷಗಳ ಕಾಲ ದೇಶ ಮುನ್ನಡೆಸಿ ದೇಶದಲ್ಲಿ ಆರ್ಥಿಕ ಸುಧಾರಣೆಗಳ ಮೂಲಕ ದೊಡ್ಡ ಕೊಡುಗೆಯನ್ನು ನೀಡಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ನಿಧನ ಹೊಂದಿರುವ ಸುದ್ದಿ ತಿಳಿದು ಅತ್ಯಂತ ದುಖಃವಾಗಿದೆ. ದೇಶದ ಅಭಿವೃದ್ದಿಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಮುತ್ಸದ್ದಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಕೆ.ಪಿ.ಸಿ.ಸಿ ರಾಜ್ಯ ಎಸ್ ಟಿ ಘಟಕದ ಪ್ರಧಾನ ಕಾರ್ಯದರ್ಶಿ ಯಾದ ಆರ್ ಸಿದ್ದನಗೌಡ ತುರುವಿಹಾಳ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅದೇ ರೀತಿ ಮಸ್ಕಿ ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯದಲ್ಲಿ ಹನುಮಂತಪ್ಪ ಮುದ್ದಾಪುರ ರವರು ನೇತೃತ್ವದಲ್ಲಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸುವ ಮೂಲಕ ಗೌರವ ನಮನ ಸಲ್ಲಿಸಿದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ