*ಕಾನಮಡುಗು ಶ್ರೀ ಶರಣಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ*

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಾನ ಮಡುಗು ಗ್ರಾಮದ ದಾಸೋಹ ಮಠದ ಶ್ರೀ ಶರಣಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಇಂದಿನ 09ರವರೆಗೆ ನಡೆಯಲಿದ್ದು, ಡಿ.10 ರಂದು ಮಂಗಳವಾರ ಸಂಜೆ 4 ಗಂಟೆಗೆ ರಥೋತ್ಸವ ಜರುಗಲಿದೆ ಎಂದು ಕಾನಮಡುಗು ದಾಸೋಹ ಮಠದ ಧರ್ಮಾಧಿಕಾರಿ ಶ್ರೀ ದಾ.ಮ.ಐಮಡಿ ಶರಣಾರ್ಯರು ತಿಳಿಸಿದ್ದಾರೆ.

ಶ್ರೀ ಶರಣಬಸವೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಇಂದು ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ನಾಡಿನ ಅಪಾರ ಭಕ್ತರು ಕಾರ್ತಿಕ ದೀಪೋತ್ಸವದಲ್ಲಿ ಭಾಗವಹಿಸುವರು. ನಂತರ ರಾತ್ರಿ 8 ಗಂಟೆಯಿಂದ ಹಾಸ್ಯ, ಸಾಂಸ್ಕೃತಿಕ ಹಾಗೂ ಭಜನಾ ಕಾರ್ಯಕ್ರಮಗಳು ನಡೆಯಲಿವೆ.

 ನಾಳೆ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ರಕ್ತದಾನ ಶಿಬಿರ, ಸಂಗೀತ ಸೇರಿ ಸಭಾ ಕಾರ್ಯಕ್ರಮ ಹಾಗೂ ಬೆಳಗ್ಗೆ 11.30 ರಿಂದ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಲಿವೆ.

 ಸಂಜೆ 4 ಗಂಟೆಗೆ ಶ್ರೀ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ನಡೆಯಲಿದ್ದು, ಸಂಜೆ 6.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

ಅದೇರೀತಿ ಡಿ.11ರಂದು ಸಂಜೆ 6 ಗಂಟೆಗೆ ಕ್ಷೇತ್ರನಾಥ ಶ್ರೀ ಶರಣಬಸವೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಜರುಗಲಿದೆ. ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳು ಧರ್ಮಾಧಿಕಾರಿ ಶ್ರೀ ದಾ.ಮ.ಐಮಡಿ ಶರಣಾರ್ಯರ ನೇತೃತ್ವದಲ್ಲಿ ನಡೆಯಲಿದ್ದು, ಪೂಜಾ ವಿಧಿ – ವಿಧಾನಗಳು ಕೊಟ್ಟೂರು ಹಿರೇಮಠದ ಶ್ರೀ ಯೋಗಿ ರಾಜೇಂದ್ರ ಸ್ವಾಮೀಜಿ, ಮುಷ್ಟೂರಿನ ಶ್ರೀ ರುದ್ರಮುನಿ ಸ್ವಾಮೀಜಿ ಹಾಗೂ ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನೆರವೇರಲಿವೆ. ಜಾತ್ರಾ ಮಹೋತ್ಸವಕ್ಕೆ ನಾಡಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀ ದಾ.ಮ.ಐಮಡಿ ಶರಣಾರ್ಯರು ಪ್ರಕಟಣೆಯಲ್ಲಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*