"ಜನಮನ ಗೆದ್ದ ನಾಯಕ ಅಟಲ್ ಜೀ"-ಪ್ರತಾಪ್ ಗೌಡ ಪಾಟೀಲ್
ಮಸ್ಕಿ : ಪಟ್ಟಣದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಅಜಾತಶತ್ರು,ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಶಾಸಕರಾದ ಶ್ರೀ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ ದೂರದೃಷ್ಟಿ ಆಡಳಿತದ ಮೂಲಕ
ಜನಮನ ಗೆದ್ದ ನಾಯಕ ಅಟಲ್ ಜೀ"
ಮಾಜಿ ಪ್ರಧಾನಿ,ಭಾರತ ರತ್ನ ದಿ.ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ವರ್ಷದ ಜನ್ಮದಿನದ ಸ್ಮರಣಾರ್ಥ ಹಾಗೂ ಸುಶಾಸನ ದಿನದ ಅಂಗವಾಗಿ ಪಕ್ಷದ ಕಾರ್ಯಾಲಯ ಅಟಲ್ ಜೀ ಅವರ ಜೀವನ ಸಾಧನೆಯ ಕುರಿತು ಮಾತನಾಡಿದರು.
ದೇಶ ಕಂಡ ಅತ್ಯುತ್ತಮ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಸ್ಮರಣೆಯ ಸಂದರ್ಭದಲ್ಲಿ ಸದೃಢ ಹಾಗೂ ಸಮೃದ್ಧ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಅವರ ಶ್ರೇಷ್ಠ ವ್ಯಕ್ತಿತ್ವವನ್ನು ದೇಶ ಸ್ಮರಿಸುತ್ತಿದೆ,ಅವರ ಆದರ್ಶಯುತ ಜೀವನ ಮತ್ತು ಸಾಧನೆಗಳು ದೇಶದ ಅಭಿವೃದ್ಧಿಯ ಪಥ ಮುನ್ನಡೆಯಲು ನಿತ್ಯ ನಿರಂತರ ಮಾರ್ಗದರ್ಶಿಯಾಗಿವೆ.
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರೈತರು,ಬಡವರು ಹಾಗೂ ಹಿಂದುಳಿದ ವರ್ಗದವರ ಪರವಾಗಿ ಕೈಗೊಂಡ ಅನೇಕ ಅಭಿವೃದ್ಧಿ ಯೋಜನೆಗಳು ಹಾಗೂ ಸಾಧನೆಗಳು ಅಟಲ್ ಜೀ ಅವರ ಕನಸುಗಳು ಸಾಕಾರಗೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿರುವುದನ್ನು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಶರಣಬಸವ ಸೊಪ್ಪಿಮಠ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜ್ ಗುರು,ಜಿಲ್ಲಾ ಕಾರ್ಯದರ್ಶಿ ಯಲ್ಲೋಜಿರಾವ್,ಸಿದ್ದಣ್ಣ ಹೂವಿನಬಾವಿ,ಪಂಪಣ್ಣ ಗುಂಡಳ್ಳಿ,ಡಾಕ್ಟರ್ ಪಂಚಾಕ್ಷರಿ ಸ್ವಾಮಿ,ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ,ಪ್ರಸನ್ನ ಪಾಟೀಲ್,ರಮೇಶ ಉದ್ಬಾಳ,ಮೌನೇಶ ನಾಯಕ,ಪುರಸಭೆ ಸದಸ್ಯರಾದ ಮೌನೇಶ ಮುರಾರಿ ಸುರೇಶ ಹರಸೂರು,ಶಿವರಾಜ್ ಬುಕ್ಕಣ್ಣ,ಮಹಿಳಾ ಮೋರ್ಚಾದ ಅಧ್ಯಕ್ಷರಾದ ಚಂದ್ರಕಲಾ ದೇಶಮುಖ್,ಅಜ್ಮೀರ್ ಮಸ್ಕಿ,ಶಾಂತಮ್ಮ ಧನ್ ಶೆಟ್ಟಿ,ಶಿಲ್ಪ ಗಿಡದ,ಹನುಮೇಶ್ ಕುಲಕರ್ಣಿ,ಮಲ್ಲಯ್ಯ ಕುರುಬರು,ಶರಣೇಗೌಡ ಪೊಲೀಸ್ ಪಾಟೀಲ್ ಹಾಗೂ ಪಕ್ಷದ ಮುಖಂಡರು,ಪಕ್ಷದ ಪದಾಧಿಕಾರಿಗಳು,ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ