ಒಳ ಮೀಸಲಾತಿ ಜಾರಿಗಾಗಿ ಶಾಸಕರ ಕಚೇರಿ ಮುಂದೆ ತಮಟೆ ಚಳುವಳಿ : ಪತ್ರಿಕಾ ಹೇಳಿಕೆ
ಮಸ್ಕಿ : ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 14ರಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳ ಅವರ ಶಾಸಕರ ಕಚೇರಿ ಮುಂದೆ ತಮಟೆ ಚಳುವಳಿ ನಡೆಸಿ ಮನವಿ ಪತ್ರ ಸಲ್ಲಿಸಲಾಗುವುದು ಹಾಗೂ ಡಿಸೆಂಬರ್ 16ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ದಲಿತ ಮುಖಂಡ ದೊಡ್ಡಪ್ಪ ಮುರಾರಿ ಹಾಗೂ ಸಾಹಿತಿ ದಾನಪ್ಪ ನಿಲೋಗಲ್ ತಿಳಿಸಿದರು.
ಮಸ್ಕಿ ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರ ಮೀನಾ ಮೇಷ ಮಾಡುತ್ತಿದೆ. ರಾಜ್ಯ ಸರ್ಕಾರ ಯಾವ ಕಾರಣಕ್ಕೆ ಸುಪ್ರೀಂಕೋರ್ಟ್ ಆದೇಶವನ್ನು ಮೀರುತ್ತಿದೆ ಎನ್ನುವುದು ನಮಗೆ ತೋಚದಂತಾಗಿದೆ. ನಮ್ಮ ನ್ಯಾಯಯುತ ಬೇಡಿಕೆಗೆ ಕೂಡಲೇ ಸರ್ಕಾರ ಸ್ಪಂದಿಸಬೇಕು ಸರ್ಕಾರ ಈವರೆಗೆ ಸ್ಪಂದಿಸಿಲ್ಲ ಆದ್ದರಿಂದ ಕೂಡಲೇ ಒಳಮಿಸಲಾತಿಯನ್ನು ಜಾರಿ ಮಾಡಬೇಕು ಡಿಸೆಂಬರ್ 16ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು. ಮಸ್ಕಿ ತಾಲೂಕಿನಿಂದ ಒಳ ಮೀಸಲಾತಿ ಜಾರಿಗೆ ಸಮುದಾಯದ ಜನಗಳು ಸಾಕಷ್ಟು ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ದೊಡ್ಡ ಕರಿಯಪ್ಪ, ಮೌನೇಶ್ ಮುರಾರಿ, ದುರ್ಗಾ ಪ್ರಸಾದ್ ತೋರಣದಿನ್ನಿ ಸೇರಿದಂತೆ ಇನ್ನಿತರರು ಇದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ