ಜಯಂತಿಗಳ ಪೂರ್ವಭಾವಿ ಸಭೆ
ಮಸ್ಕಿ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ವಿಶ್ವಮಾನವ ಕುವೆಂಪು ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತಿಯ ಅಂಗವಾಗಿ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರೇಡ್_2 ಅವರು ಮಾತನಾಡಿ, ಇದೇ ಡಿ.29 ರಂದು ಬೆಳಿಗ್ಗೆ ವಿಶ್ವಮಾನವ ಕುವೆಂಪು ಅವರ ಜಯಂತಿಯನ್ನು ತಾಲ್ಲೂಕು ಆಡಳಿತದಿಂದ ಆಚರಿಸಲಾಗುತ್ತದೆ, ತಹಶೀಲ್ದಾ ಕಚೇರಿಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸುವ ಮೂಲಕ ಆಚರಿಸಲಾಯಿತು.
ಹಾಗೂ ಜ.1 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರದ ಆದೇಶದಂತೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಜಯಂತಿ ಅಂಗವಾಗಿ, ಅಂದು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಅಮರಶಿಲ್ಪಿ ಜಕಣಾಚಾರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಇಬ್ಬರು ಮಹನೀಯರ ಜಯಂತಿಯನ್ನು ತಾಲೂಕಿನ ಎಲ್ಲಾ ಶಾಲಾ, ಕಾಲೇಜು, ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಹಾಗೂ ತಾಲೂಕು ಆಡಳಿತದಿಂದ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆ ಕಾರ್ಯನಿರ್ವಹಣಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು, ಭಾಗವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಈ ಸಭೆಯಲ್ಲಿ ಮಸ್ಕಿ ತಾಲ್ಲೂಕು ವಿಶ್ವಕರ್ಮ ಸಮಾಜದವರು ಹಾಗೂ ವಿವಿಧ ಅಧಿಕಾರಿಗಳು, ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ