ಮಾರ್ಚ್ 4 ರಿಂದ 9 ರವರೆಗೆ 45 ನೇ ನ್ಯಾಷನಲ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಸ್ ಶಿಪ್ ಕ್ರೀಡೆ

 

ಬೆಂಗಳೂರು: ಮಾರ್ಚ್ 4 ರಿಂದ 9 ತನಕ 45 ನೇ ನ್ಯಾಷನಲ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಸ್ ಶಿಪ್ ಕ್ರೀಡಾ ಕೂಟ 

ಮಾಸ್ಟರ್ಸ್ ಅಥ್ಲೆಟಿಕ್ ಫೇಡರೇಷನ್ ‌ಆಫ್ ಇಂಡಿಯಾ ಸಂಸ್ಥೆಯು 2025 ರ ಮಾರ್ಚ್ ತಿಂಗಳ 4 ರಿಂದ 9 ರ ತನಕ 45 ನೇ ನ್ಯಾಷನಲ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಸ್ ಶಿಪ್ ಕ್ರೀಡಾ ಕೂಟ ಬೆಂಗಳೂರಿನಲ್ಲಿ ಆಯೋಜಿಸಿದೆ.

ಮಹಿಳಾ‌ ಮತ್ತು‌‌ಪುರುಷರ ವಿಭಾಗದಲ್ಲಿ 35 ವರ್ಷದ ದಿಂದ 100 ವರ್ಷ ವಯೋಮಿತಿಯ ‌ಕ್ರೀಡಾಪಟುಗಳು‌ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಈ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಇಂಡೋನೇಷ್ಯಾದಲ್ಲಿ ಈ ವರ್ಷ ನಡೆಯುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವ‌ ಅರ್ಹತೆ ಪಡೆಯತ್ತಾರೆ ಎಂದು ಕ್ರೀಡಾ ಕೂಟದ ಕಾರ್ಯಕಾರಿ ಸಮಿತಿಯ ಸಂಘಟನಾ ಕಾರ್ಯದರ್ಶಿ ಸಂತೋಷ್.ಎಲ್.ಕೃಷ್ಣ ತಿಳಿಸಿದ್ದಾರೆ.











‌ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI) ಕ್ರೀಡಾಂಗಣದಲ್ಲಿ ನಡೆಯುವ ಈ ಕ್ರೀಡಾ ಕೂಟದಲ್ಲಿ ದೇಶದ ಎಲ್ಲಾ ರಾಜ್ಯಗಳ ಕ್ರೀಡಾ ಪಟುಗಳು ಭಾಗವಹಿಸಲಿದ್ದಾರೆ ಎಂದು ಮಾಸ್ಟರ್ಸ್ ಅಥ್ಲೆಟಿಕ್ಸ್ ಫೇಡರೇಷನ್ ಆಫ್‌ ಇಂಡಿಯಾ ಈ ಕ್ರೀಡಾಕೂಟದ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರಮಟ್ಟದಲ್ಲಿ ನಡೆಯುವ ಈ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳು ಭಾಗವಹಿಸಿ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಬೇಕು ಎಂದು‌‌ ಕೆ.ಲಕ್ಷ್ಮೀನಾರಾಯಣ ಮನವಿ ಮಾಡಿದ್ದಾರೆ.

ಮಾಸ್ಟರ್ಸ್ ಅಥ್ಲೆಟಿಕ್ಸ್ ಫೇಡರೇಷನ್ ಆಫ್ ಇಂಡಿಯಾ ಈ ಕ್ರೀಡಾಕೂಟದ ಕಾರ್ಯಕಾರಿ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್ ಎಲ್‌ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆ. ಲಕ್ಷ್ಮೀ‌ನಾರಾಯಣ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ : ಕೆ.ಲಕ್ಷ್ಮೀನಾರಾಯಣ: 8123426658,

ಸಂತೋಷ್ ಎಲ್. 8197835301

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*