ಆನ್ವರಿ ಸರಕಾರಿ ಪ್ರೌಢ ಶಾಲೆಯಲ್ಲಿ ಅದ್ದೂರಿಯಾಗಿ ಜರುಗಿದ 76ನೇ ಗಣರಾಜ್ಯೋತ್ಸವ.

 

ಹಟ್ಟಿ ಚಿನ್ನದ ಗಣಿ;ಜ-26ಆನ್ವರಿ ಸರಕಾರಿ ಪ್ರೌಢಶಾಲೆಯಲ್ಲಿ ಇಂದು 76ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಶಂಕ್ರಮ್ಮ | ತಿರುಪತಿಯವರು ನೇರವೇರಿಸಿದರು.ನಂತರ ಮಹಾತ್ಮ ಗಾಂಧೀಜಿ ಹಾಗೂ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ನಂತರ ಪ್ರೌಢಶಾಲೆಯ ಮುಖ್ಯೋಪಾಧ್ಯಾರಾದ ಶ್ರೀ ಶಂಕ್ರಪ್ಪ ಸಕ್ರಿ 76ನೇ ಗಣರಾಜ್ಯೋತ್ಸವದ ಕುರಿತು ಮಾತನಾಡಿದರು.

2024-25 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೇಂದ್ರ ಅನ್ವರಿಯಾಗಿದ್ದು.ಐದು ಶಾಲೆಯ ವಿದ್ಯಾರ್ಥಿಗಳು ಒಟ್ಟು 240 ಪರೀಕ್ಷಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯುತ್ತಾರೆ. ಡಬ್ಲ್ಯೂ ಈ ಬಿ ಕ್ಯಾಮರಾ ಅಳವಡಿಸಿದ್ದು ಯಾವುದೇ ಅವ್ಯವ್ಯವಹಾರಕ್ಕೆ ಆಸ್ಪದವಿಲ್ಲ. ಆದುದರಿಂದ ವಿದ್ಯಾರ್ಥಿಗಳು ಮನೆಯಲ್ಲಿ ಚೆನ್ನಾಗಿ ಓದಿಕೊಂಡು ಪರೀಕ್ಷೆಯನ್ನು ಬರೆಯಿರಿ ಎಂದು ಹೇಳಿದರು. ಸರ್ಕಾರಿ ಪ್ರೌಢಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಶಾಲೆಯ ಸಹ ಶಿಕ್ಷಕರು ಹಾಗೂ ಮುದ್ದು ವಿದ್ಯಾರ್ಥಿಗಳು. ಭಾಗವಹಿಸಿದ್ದರು ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕರಾದ ಆರೋಗ್ಯಪ್ಪ ಶಿಕ್ಷಕರು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*