ನಾಳೆ ಶಾ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ : ಮಲ್ಲಪ್ಪ ಎಸ್ ಗೋನಾಳ
ಮಸ್ಕಿ : ಡಾ.ಬಾಬಾ ಸಾಹೇಬರ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಗೊಳಿಸಬೇಕು. ಅಂಬೇಡ್ಕರ್ ಪ್ರತಿಮೆ ಮುಂಭಾಗ ಕ್ಷಮೆ ಕೇಳಲೇಬೇಕು ಮತ್ತು ಸ್ವಾಭಿ ಮಾನಿ ದಲಿತ ಯುವ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ದದ ಬಿಜೆಪಿಯ ಪಿತೂರಿ ರಾಜ ಕಾರಣ ಹಿಮ್ಮೆಟ್ಟಿಸಲು ಜ.23 ರಂದು ಬೆಂಗಳೂರಿನ ಪ್ರೀಡಂಪಾರ್ಕ್‌ನಲ್ಲಿ
ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು ಜಿಲ್ಲೆಯ ಹಾಗೂ
ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಸಂಯೋಜಕ ಬಣದ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ ಎಸ್ ಗೋನಾಳ ರವರು ಕರೆ ನೀಡಿದರು.
ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು,
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಲ್ಲಿಕಾರ್ಜುನ ಖರ್ಗೆಯವರನ್ನು ಎದುರಿಸಲಾಗದೇ ಏಡಿಗಳಂತೆ ಅವರ ಮಗ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳ ಆರೋಪ ಹೊರಿಸಿ ಸ್ವಾಭಿಮಾನಿ ದಲಿತ ಯುವ ನಾಯಕರ ಬಾಯಿ ಮುಚ್ಚಿಸಲು ಮುಂದಾಗಿದೆ. ಆದ್ದರಿಂದ ದಲಿತ ಬಂಧುಗಳೇ ಬನ್ನಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಲು ಕೈ ಜೋಡಿಸಿ ನಾವು ಎಲ್ಲರೂ ಬೆಂಗಳೂರು ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ತಾಲೂಕಿನಿಂದ ಎರಡೂ ಸಾವಿರ ಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆಯಿದ್ದು ಅಂದಿನ ಪ್ರತಿಭಟನೆಯಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಈ ವೇಳೆ, ಪ್ರಮುಖ ದಲಿತ ಮುಖಂಡರು ಚಿಂತಕರು ಇದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ