ಈ ಭಾಗಕ್ಕೆಆದ್ಯತೆಯ ಮೇರೆಗೆ ಸರ್ವೆ ಮೂಲಕ ಹೊಸ ಲೈನ್ ಗಳನ್ನು ಕೊಡ ಮಾಡಬೇಕು: ಸಿವಿಸಿ

 

ವರದಿ - ಮಂಜುನಾಥ್ ಕೋಳೂರು ಕೊಪ್ಪಳ

 ಕೊಪ್ಪಳ : - ಜಿಲ್ಲಾ ಕೇಂದ್ರ ಕೊಪ್ಪಳ ನಗರದ ಕುಷ್ಟಗಿ ರಸ್ತೆಯ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೆ ಆಗಮಿಸಿರುವ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕೊಪ್ಪಳ ನಗರದ ಕುಷ್ಟಗಿಗೆ ಹೋಗುವ ಮಾರ್ಗದ ಮೆಲ್ ಸೇತುವೆಯನ್ನು ಇಂದು ಉದ್ಘಾಟಿಸಲು ಆಗಮಿಸಿದಂತ

ಸಂದರ್ಭದಲ್ಲಿ ಈ ಭಾಗದ ರೈಲ್ವೆ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಸಾರ್ವಜನಿಕರ ಸೌಲಭ್ಯಗಳನ್ನು ಇನ್ನಷ್ಟು ಉತ್ತಮಪಡಿಸಬೇಕು ಹಾಗೂ ಸರ್ವೆ ಮಾಡುವ ಮೂಲಕ ಹೊಸ ಲೈನ್ ಗಳನ್ನು ಈ ಭಾಗಕ್ಕೆ ಕೊಡ ಮಾಡಬೇಕೆಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ರಾಜ್ಯಜೆ.ಡಿ.(ಎಸ್) ಕೋರ್ ಕಮಿಟಿ ಸದಸ್ಯ ಸಿ.ವಿ ಚಂದ್ರಶೇಖರ ಪಕ್ಷದ ಪರವಾಗಿ ಹಾಗೂ ಸಮಸ್ತ ಲೋಕಸಭಾ ಕ್ಷೇತ್ರದ ಜನರ ಪರವಾಗಿ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ , ಜೆ ಡಿ (ಎಸ್) ಪಕ್ಷದ ನಗರ ಘಟಕದ ಅಧ್ಯಕ್ಷ ಸೋಮನಾಥ ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*