ಜವಾಹರ ನವೋದಯ ಪ್ರವೇಶ ಪರೀಕ್ಷೆ ಶಾಂತಿಯುತ

 

ಮಸ್ಕಿ : ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕಾಗಿ ಶನಿವಾರ ನಡೆದ ಪರೀಕ್ಷೆಗೆ 36 ವಿದ್ಯಾರ್ಥಿಗಳು ಗೈರು ಹಾಜರು.

ಪಟ್ಟಣದ ಬಾಲಕಿಯ ಪ್ರೌಢ ಶಾಲೆ ಹಾಗೂ ಜೋಗಿನ್ ರಾಮಣ್ಣ ಸ್ಮಾರಕ ಪ್ರೌಢಶಾಲಾ ಶಾಲೆಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 565 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು.

ಬೆಳಗ್ಗೆ 11.30ರಿಂದ 1.30ರವರೆಗಿನ ಪರೀಕ್ಷೆಯಲ್ಲಿ 565 ವಿದ್ಯಾರ್ಥಿಗಳು ಹಾಜರಾಗಿದ್ದರು. ಪಾರದರ್ಶಕತೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪರೀಕ್ಷೆ ಜರುಗಿತು.

ಈ ಬಗ್ಗೆ ತಹಶೀಲ್ದಾರರು ಮಾತನಾಡಿ ಶಾಲೆ ಪ್ರವೇಶಕ್ಕಾಗಿ 2 ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಿದ್ದು, ಶಾಂತಿಯುತವಾಗಿ ಸುಸೂತ್ರವಾಗಿ ಪೂರ್ಣಗೊಂಡಿವೆ ಎಂದರು. ಪರೀಕ್ಷಾ ಕೇಂದ್ರ ಸುತ್ತಲೂ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*