7 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ವತಿಯಿಂದ ಮನವಿ ಸಲ್ಲಿಕೆ

ಮಸ್ಕಿ : ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಸಮಿತಿ ಮಸ್ಕಿ ವತಿಯಿಂದ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ನಂತರ ವಿಷಯವನ್ನು ಓದುತ್ತಾ ನಿರಂತರವಾಗಿ ಮಹಿಳೆಯರ ಮೇಲೆ, ಬಾಲಕಿಯರ ಮೇಲೆ ಅತ್ಯಾಚಾರಗಳು, ಕೊಲೆ, ಸುಲಿಗೆ, ದೌರ್ಜನ್ಯಗಳು ಮಿತಿಮೀರಿ ನಡೆಯುತ್ತಿವೆ. ಸ್ವಾತಂತ್ರ್ಯ ಬಂದು 76 ವರ್ಷಗಳೇ ಗತಿಸಿದರೂ ಇನ್ನೂ ಕೂಡ ಈ ಸಮಾಜದಲ್ಲಿ ಮಹಿಳೆಯರು ಸ್ವತಂತ್ರವಾಗಿ ಬದುಕಲು ಸಾಧ್ಯವಾಗುತ್ತಿಲ್ಲ.

ಈ ದೇಶದಲ್ಲಿ ದಿನನಿತ್ಯ ಒಂದಲ್ಲ ಒಂದು ರೀತಿ ಮಹಿಳೆಯರ ಮೇಲೆ ದೌರ್ಜನಗಳು ನಡೆಯುತ್ತಾ ಬರುತ್ತಿವೆ, ಮೊನ್ನೆ ದಿನ ಮಾನವಿ ತಾಲೂಕಿನ ಪೋತ್ನಾಳ ಗ್ರಾಮದ ಖಾಸಗಿ ಶಾಲೆಯೊಂದರ 7 ವರ್ಷದ ಪುಟ್ಟ ಕಂದಮ್ಮನ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆಯು ಇಡೀ ಮಾನವ ಸಮಾಜವೇ ತಲೆತಗ್ಗಿಸುವಂಥಾಗಿದೆ. 

ಹೌದು ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ವಿದ್ಯಾಭಾರತಿ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು, ಬುಧವಾರ ಸಂಜೆ ಸಮಯಕ್ಕೆ ಸರಿಯಾಗಿ ಪೋಷಕರ ಜೊತೆ ವಿದ್ಯಾರ್ಥಿಗಳನ್ನು ಕಳಿಸಬೇಕಾಗಿದ್ದ ಶಾಲೆಯ ಮುಖ್ಯಸ್ಥರು ವಿದ್ಯಾರ್ಥಿನಿಗೆ ಅಪರಿಚಿತವಾಗಿರುವಂತಹ ಶಿವನಗೌಡ ಎಂಬುವರ ಜೊತೆ ಬಾಲಕಿಯನ್ನು ಕಳಿಸಿದ್ದರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಆದ್ದರಿಂದಾಗಿ ಈ ದುಷ್ಕೃತ್ಯದಿಂದಾಗಿ ಇಡೀ ರಾಜ್ಯವೇ ಇಂದು ಬೆಚ್ಚಿ ಬೀಳುವಂತಾಗಿದೆ, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ, ವಿದ್ಯಾರ್ಥಿನಿಯರು ಶಾಲಾ ಕಾಲೇಜುಗಳಿಗೆ ಹೋಗಿ ಮನೆಗೆ ಹಿಂದಿರುಗಿ ಬರುವವರೆಗೂ ಅವರ ಪಾಲಕರು ಜೀವವನ್ನು ಕೈಯಲ್ಲಿ ಹಿಡಿದು ಕಾಯುವಂತಹ ಪರಿಸ್ಥಿತಿ ಇಂದು ಸೃಷ್ಟಿಯಾಗಿದೆ. 

ಆದ್ದರಿಂದ ನಮ್ಮನ್ನಾಳುವ ಸರ್ಕಾರಗಳು ಇನ್ನಾದರೂ ಎಚ್ಚೆತ್ತುಕೊಂಡು ಇಂತಹ ನೀಚ ಕಾಮುಕರಿಗೆ ಕಠಿಣ ಶಿಕ್ಷೆಯನ್ನು ನೀಡಿ ಮುಂದೆಂದೂ ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೊಳಿಸಬೇಕು, ಮತ್ತು ಪೋತ್ನಾಳ ಗ್ರಾಮದ ವಿದ್ಯಾಭಾರತಿ ಶಾಲೆಯ ಮುಖ್ಯಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಆ ಶಾಲೆಯನ್ನು ಕೂಡ ರದ್ದು ಮಾಡಬೇಕು,ಹಾಗೂ ಸಂತ್ರಸ್ತ ಬಾಲಕಿಗೆ ಸೂಕ್ತ ಪರಿಹಾರವನ್ನು ನೀಡಿ ವಿದ್ಯಾರ್ಥಿನಿಯರ ರಕ್ಷಣೆಗೆ ವಿಶೇಷ ಕಾಯಿದೆ ಜಾರಿ ಮಾಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಸಮಿತಿ ಮಸ್ಕಿ ವತಿಯಿಂದ ಎಲ್ಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸಮ್ಮುಖದಲ್ಲಿ ಉಪ ತಹಶೀಲ್ದಾರರಾದ ನಾಗಲಿಂಗ ಪತ್ತಾರ್ ಇವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುಸೇನಪ್ಪ ಇರಕಲ್, ಸಿಂಧನೂರು ತಾಲೂಕ ಅಧ್ಯಕ್ಷ ದುರುಗೇಶ ಕಲಮಂಗಿ,ಮಹಿಳಾ ಮುಖಂಡರಾದ ದುರುಗಮ್ಮ ಮಸ್ಕಿ,ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*