ನೌಕರ ಸಂಘದ ಮಸ್ಕಿ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ
ಮಸ್ಕಿ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ರಾಜ್ಯ ಸಮಿತಿ ಬೆಂಗಳೂರು ಇವರ ಆದೇಶದಂತೆ ಮಸ್ಕಿ ತಾಲೂಕಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಮಸ್ಕಿ ತಾಲೂಕಿನ ನೂತನ ಅಧ್ಯಕ್ಷರಾಗಿ ಶ್ರೀ ಹುಸೇನ್ ಸಾಬ್ ಗುರಿಕಾರ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರವೀಂದ್ರ ಕುಂಬಾರ, ಖಜಾಂಚಿ ಶ್ರೀಮತಿ ಭಾಗ್ಯಲಕ್ಷ್ಮಿ, ಜಿಲ್ಲಾ ಪರಿಷತ್ ಸದಸ್ಯರಾಗಿ ಬಸವರಾಜ್.ಬಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಶ್ರೀ ನಾಗೇಶ್ ಗೌಡ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ತಾಲೂಕಿನ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಬಗೆಯ ತೊಂದರೆಯನ್ನು ನಿವಾರಿಸುವ ಸಲುವಾಗಿ ಸಂಘಟನೆ ಬಲಪಡಿಸಲು ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ