ಪತ್ರಕರ್ತರು ಕ್ರೀಡಾಮನೋಭಾವ ಬೆಳೆಸಿಕೊಳ್ಳಲು ಸಲಹೆ ಶ್ರೀರಾಮುಲು

 

ಕೊಟ್ಟೂರು: ಶನಿವಾರ ಕೊಟ್ಟೂರಿನಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀರಾಮುಲು ಮಾತನಾಡಿ ಪತ್ರಕರ್ತರು ಸದಾ ಚುರುಕಿನಿಂದ ಸಾಮಾಜಿಕ ಬದಲಾವಣೆಗಳಿಗಾಗಿ ಶ್ರಮಿಸುವವರಾಗಿದ್ದು, 

ಇವರು ಕ್ರಿಕೆಟ್ ಆಡುವ ಮೂಲಕ ತಮ್ಮ ದೇಹದಾಢ್ಯತೆಯನ್ನು ಬೆಳೆಸಿಕೊಳ್ಳಬೇಕು ಮತ್ತು ಕರ್ನಾಟಕ ಪ್ರೆಸ್‌ಕ್ಲಬ್ ವತಿಯಿಂದ ಹಳ್ಳಿಗಳಿಂದ ಬರುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಈ ಟೂರ್ನಿಮೆಂಟ್ ಆಯೋಜಿಸಿರುವುದು ಒಳ್ಳೆಯ ಬೆಳವಣಿಗೆ ಎಂದರು. ನಿಮ್ಮ ಕ್ರೀಡೆಯನ್ನು ಕ್ರೀಡಾಸ್ಪೂರ್ತಿಯಿಂದ ಆಡಿ, ಒಳ್ಳೆಯ ಮನೋಭಾವ ಬೆಳೆಸಿಕೊಳ್ಳಿ ಎಂದರು. ಕರ್ನಾಟಕ ಪ್ರೆಸ್‌ಕ್ಲಬ್ ವತಿಯಿಂದ ರಾಜ್ಯ ಉಪಾಧ್ಯಕ್ಷರಾದ ಕೆ.ಕೊಟ್ರೇಶ್, ಎಂ.ಶ್ರೀನಿವಾಸ್ ವತಿಯಿಂದ ರಾಮುಲುರವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿ.ಜೆ.ಪಿ. ತಾಲ್ಲೂಕು ಮುಖಂಡರಾದ ಭರಮನಗೌಡ, ಪ.ಪಂ. ಉಪಾಧ್ಯಕ್ಷ ಸಿದ್ದಯ್ಯ ಉಪಸ್ಥಿತರಿದ್ದು ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಪ್ರಮುಖ ಮುಖಂಡರು ಸೇರಿದ್ದರು

 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*