ಸರ್ಕಾರಿ ನೌಕರರು ಮತ್ತು ಕುಟುಂಬ ವರ್ಗದವರಿಗೆಉಚಿತ ಆರೋಗ್ಯ ತಪಾಸಣೆ ಶಿಬಿರ : ಸಿ.ಜೋತಾನ್

  

ಮಸ್ಕಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕ ಶಾಖೆ ಮಸ್ಕಿ ಇವರುಗಳ ಸಂಯುಕ್ತಾಶ್ರಯದಲ್ಲಿ 

ತಾಲೂಕಿನ ಸಮಸ್ತ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏ.05 ಶನಿವಾರ ರಂದು ಪಟ್ಟಣದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಆವರಣದಲ್ಲಿ ಏರ್ಪಡಿಸಲಾಗಿದ್ದು ಹೃದಯ ಸಂಬಂಧಿ ಕಾಯಿಲೆ, ನರರೋಗ, ಮಧುಮೇಹ, ಕ್ಯಾನ್ಸರ್, ಕಣ್ಣಿನ ಸಮಸ್ಯೆ,ಸ್ತ್ರೀ ರೋಗ ಸಮಸ್ಯೆ ಸೇರಿದಂತೆ ಅನೇಕ ಕಾಯಿಲೆಗಳಿಗೆ ಉಚಿತವಾಗಿ ತಪಾಸಣೆ ಮಾಡಿ ಅವಶ್ಯವಿದ್ದಲ್ಲಿ ಉಚಿತ ಶಸ್ತ್ರಚಿಕಿತ್ಸೆ ಸಹ ಮಾಡಲಾಗುವುದು ಎಂದು ನೌಕರರ ಸಂಘದ ಅಧ್ಯಕ್ಷ ಪಂಪಾಪತಿ ಹೂಗಾರ ರವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಆರೋಗ್ಯ ಶಿಬಿರಕ್ಕೆ ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಖ್ಯಾತ ವೈದ್ಯರಾದ ಕೆ.ಮಲ್ಲಿಕಾರ್ಜುನ ಹಚ್ಚೂಳ್ಳಿ ರವರು ಆಗಮಿಸುತ್ತಿದ್ದು ತಾಲೂಕಿನ ಎಲ್ಲಾ ಸರಕಾರಿ ನೌಕರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನೌಕರರ ಸಂಘದ ಕಾರ್ಯದರ್ಶಿ ಚನ್ನವೀರ ಜೋತಾನ್ ರವರು ಮನವಿ ಮಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*