ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಂಬೇಡ್ಕರ್ ವೃತ್ತ ಬಳಿ ಪ್ರತಿಭಟನೆ
ಮಸ್ಕಿ : ಹಾಲು, ಮೊಸರು ಸೇರಿದಂತೆ ಪೆಟ್ರೋಲ್ ಡಿಸೇಲ್ ದರ ಏರಿಕೆ ವಿರೋಧಿಸಿ ಮಸ್ಕಿ
ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಗ್ರೇಡ್ 2 ತಹಶಿಲ್ದಾರರ ಮೂಲಕ ಮನವಿಯನ್ನು ಸಲ್ಲಿಸಿದರು.
ಬಿಜೆಪಿ ಕಾರ್ಯಾಲಯದಿಂದ ಹಳೇ ಬಸ್ ನಿಲ್ದಾಣದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ವೃದ್ಧವರೆಗೆ ಕಾಲ್ನಡಿಗೆ ಮೂಲಕ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಬಂದು ವೃತ್ತದ ಬಳಿ ಸೇರಿ ಮೊದಲಿಗೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪರತಿಭಟಿಸುತ್ತಾ ಈ ವೇಳೆ ಮಾತನಾಡಿದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ರವರು
ಕಾಂಗ್ರೆಸ್ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಸೇರಿದಂತೆ ಅಗತ್ಯ ವಸ್ತುಗಳನ್ನು
ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿ ಲೂಟಿ ಹೊಡೆಯಲು ಆರಂಭಿಸಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಹೇಳೋದೊಂದು ಮಾಡೋದೊಂದಾಗಿದೆ.
ಮುಖ್ಯಮಂತ್ರಿಗಳು ಸುಳ್ಳು ಹೇಳುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದರು.
ಮಂಡಲ ಅಧ್ಯಕ್ಷ ಶರಣ ಬಸವ ಸೊಪ್ಪಿಮಠ, ಮಲ್ಲಪ್ಪ ಅಂಕುಶದೂಡ್ಡಿ,ಸಿದ್ದಣ್ಣ ಹೂವಿನ ಬಾವಿ, ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ ವಿರುದ್ಧ ಮಾತನಾಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ, ಹಿರಿಯ ನಾಯಕರು, ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ