ಸಿಡಿಲು ಬಡಿದು ಓರ್ವ ಸಾವು, ಮೂವರಿಗೆ ಗಾಯ

 

ಮಸ್ಕಿ : ತಾಲೂಕಿನ ಹರ್ವಾಪೂರ ಗ್ರಾಮದಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಸಹಿತ ಮಳೆಯ ವೇಳೆ ಸಿಡಿಲು ಬಡಿದು ನಿಂಗಪ್ಪ ತಂದೆ ರಾಮಣ್ಣ (38) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ 

ಜೊತೆಯಲ್ಲಿ ಇದ್ದ ಎತ್ತು ಸಹ ಸಿಡಿಲಿಗೆ ಬಲಿಯಾಗಿದ್ದು, ಅವರ ಅಣ್ಣನ ಮಗ ನಾಗರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಲಿಂಗಸಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ತಲೆಖಾನ್ ಗ್ರಾಮದ ಲಕ್ಷ್ಮಿ (32) ಹಾಗೂ ಹನುಮಂತಿ (30) ಎಂಬ ಇಬ್ಬರು ಮಹಿಳೆಯರು ಕೂಡ ಸಿಡಿಲಿಗೆ ಗಂಭೀರವಾಗಿ ಗಾಯಗೊಂಡಿದ್ದು, ಮಸ್ಕಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸ್ಥಳಕ್ಕೆ ಶಾಸಕ ಆರ್. ಬಸನಗೌಡ ತುರುವಿಹಾಳ ಹಾಗೂ ತಾಲೂಕಾ ದಂಡಾಧಿಕಾರಿ ಮಲ್ಲಪ್ಪ ಕೆ. ಯರಗೋಳ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*