ಮಸ್ಕಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಮಸ್ಕಿ : ಪಟ್ಟಣದ ಗಾಂಧಿನಗರದ ಹೊಸ ಬಸ್ ನಿಲ್ದಾಣದಲ್ಲಿನ ಗಾಂಧಿ ಪ್ರತಿಮೆ ಪಕ್ಕದಲ್ಲಿ ಇರುವ ಹಳೆಯ ನಿರೀಕ್ಷಣಾ ಮಂದಿರದ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನ್ ಅನ್ನು ಶಾಸಕ ಬಸನಗೌಡ ತುರುವಿಹಾಳ ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು,
ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ಪಟ್ಟಣಕ್ಕೆ ಅವಶ್ಯಕವಾದ ಯೋಜನೆಯಾಗಿದೆ.ಬಡಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ, ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ. ಹೀಗಾಗಿ ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲು ಈಗಾಗಲೇ ಸೂಚಿಸಲಾಗಿದೆ ಎಂದರು.ನಂತರ ತಹಶೀಲ್ದಾರರಾದ ಡಾ.ಮಲ್ಲಪ್ಪ.ಕೆ.ಯರಗೋಳ ರವರು ಮಾತನಾಡಿ, ಹಸಿವು ಮುಕ್ತ ಕರ್ನಾಟಕ ಯೋಜನೆ ಅಡಿ ತಾಲೂಕಿಗೆ ಒಂದರಂತೆ ಇಂದಿರಾ ಕ್ಯಾಂಟೀನ್ ಆರಂಭಿಸುವ ಯೋಜನೆಯಡಿ ಸಿಎಂ ಸಿದ್ದರಾಮಯ್ಯ ಅವರ ಯೋಜನೆ
ಸಕಾಲದಲ್ಲೇ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಇಂದು ಇಂದಿರಾ ಕ್ಯಾಂಟೀನ್ ಅನ್ನು ಶಾಸಕರು ಉದ್ಘಾಟಿಸಿದ್ದು ಖುಷಿ ತಂದಿದೆ. ಪಟ್ಟಣಕ್ಕೆ ಆಗಮಿಸುವ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೆ, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್ ಗುಣಮಟ್ಟದ ಆಹಾರ ಸಿಗಲಿದೆ ಎಂದರು. ಈ ಸಂದರ್ಭದಲ್ಲಿ ಮಹಿಬೂಬ ಸಾಬ ಮುದ್ದಾಪುರ ಗ್ಯಾರಂಟಿ ತಾಲೂಕ ಅಧ್ಯಕ್ಷ,ವೆಂಕಟೇಶ ಎಇಇ ಜೆಸ್ಕಾಂ ಇಲಾಖೆ, ಪುರಸಭೆ ಅಧಿಕಾರಿ ನರಸರೆಡ್ಡಿ,ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಬಸನಗೌಡ ಪೊಲೀಸ್ ಪಾಟೀಲ, ನಾಗಭೂಷಣ ಬಾರಿಕೇರ,ಮಲ್ಲಯ್ಯಮುರಾರಿ, ನಾರಾಯಣಪ್ಪ ಕಾಸ್ಲಿ,ಕಾಸಿಂ. ಡಿ.ಮುರಾರಿ,ಕಿರಣ್ ವಿ.ಮುರಾರಿ, ಸಿದ್ದು ಮುರಾರಿ, ದುರಗರಾಜ ವಟಗಲ್, ಮಲ್ಲಿಕ್ ಮುರಾರಿ,ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಕಾಂಗ್ರೆಸ್ ಪಕ್ಷದ ಪ್ರಮುಖಮುಖಂಡರು,
ಕಾರ್ಯಕರ್ತರು, ಮಹಿಳೆಯರು ಸೇರಿದಂತೆ ಇನ್ನಿತರರು ಇದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ