ಪೌರ ಕಾರ್ಮಿಕರ ಬೇಡಿಕೆ ಈಡೇರಿಸುವವರೆಗೆ ಧರಣಿ ಹಿಂಪಡೆಯಲ್ಲ : ಶಿವಣ್ಣ ಒತ್ತಾಯ

 

ಮಸ್ಕಿ : ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ಕಾರ್ಮಿಕರು ಇಲ್ಲಿಯ ಪುರಸಭೆ ಕಚೇರಿ ಎದುರು ಬುಧುವಾರ ಎರಡನೇ ದಿನದ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.

ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಶಿವಣ್ಣ ಮಾತನಾಡಿ, ಪೌರ ಕಾರ್ಮಿಕರನ್ನು ರಾಜ್ಯ ಸರಕಾರಿ ನೌಕರರು ಎಂದು ಪರಿಗಣಿಸಬೇಕು, ಎಲ್ಲ ನೌಕರರಿಗೆ ಎಸ್ಎಫ್‌ಸಿ ವೇತನ ನೀಡುವುದು, ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಬೇಡಿಕೆ ಈಡೇರಿಸುವವರೆಗೆ ಧರಣಿ ಮುಂದುವರಿಯಲಿದೆ ಎಂದರು. 

ಈ ಸಂದರ್ಭದಲ್ಲಿ ಧರಣಿ ನಿರತ ಮಸ್ಕಿ ಪುರಸಭೆಯ ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*