ಗ್ರಾಮ ಪಂಚಾಯತಿ ಮನೆಗಳೆಲ್ಲ ಭ್ರಷ್ಟರ ಪಾಲು ಬಡವರೆಲ್ಲಾ ಬೀದಿಪಾಲು : ಶರಣಬಸವ ಸೊಪ್ಪಿಮಠ

 

ಮಸ್ಕಿ : ತಾಲೂಕಿನ ಮಾರಲದಿನ್ನಿ ಗ್ರಾಮದಲ್ಲಿ ಪ್ರತಿಭಟನೆ ಮಾಡುವ ಮೂಲಕ ಆಡಳಿತ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಇವರಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು.

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ವಸತಿ ಯೋಜನೆ ಭ್ರಷ್ಟಾಚಾರದ ಕುರಿತು ಪ್ರತಿಭಟನೆ ಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸುತ್ತಿದ್ದು,

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷರಾದ ಶರಣಬಸವ ಸೊಪ್ಪಿಮಠ ಮಾತನಾಡಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ಆದೇಶದಂತೆ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಯಿತು

ಅದರಂತೆ ಇಂದಿನಿಂದ ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಂತೆಕೆಲ್ಲೂರ್ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಾರಲದಿನ್ನಿ, ಸಂತೆಕೆಲ್ಲೂರ್ ಮಟ್ಟೂರು, ಮತ್ತು ಸರ್ಜಾಪುರ ಗ್ರಾಮ ಪಂಚಾಯತಿಗಳಲ್ಲಿ ಮನೆಗಳೆಲ್ಲ ಭ್ರಷ್ಟರ ಪಾಲು ಬಡವರೆಲ್ಲ ಬೀದಿಪಾಲು ಕಾಂಗ್ರೆಸ್ ಸರಕಾರದ ವಸತಿ ನಿಗಮದಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಮುಂದೆ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪಕ್ಷದ ಹಿರಿಯ ಮುಖಂಡರಾದ ಬಸವಂತರಾಯ ಕುರಿ ಅವರು ಹಾಗೂ ಯುವ ಮುಖಂಡರಾದ ಪ್ರಸನ್ನ ಪಾಟೀಲ್ ಅವರು ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿರುದ್ಧ ಮಾತನಾಡಿದರು.  

ಇದೇ ಸಂದರ್ಭದಲ್ಲಿ ಮಲ್ಲೇಶ್ ಗೌಡ ಮಟ್ಟೂರು, ಗವಿಸಿದ್ದಪ್ಪ ಸಾಹುಕಾರ ಸಂತೆಕೆಲ್ಲೂರ, ಶರಣೇಗೌಡ ಪೊಲೀಸ್ ಪಾಟೀಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್ ಗುಡಿಹಾಳ, ರಮೇಶ್ ಉದ್ಬಾಳ್, ಯುವ ಮೋರ್ಚಾ ಅಧ್ಯಕ್ಷರಾದ ಶರಣೇಗೌಡ ಪೊಲೀಸ್ ಪಾಟೀಲ್ ತಿಡಿಗೋಳ, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ರಮೇಶ್ ನಾಯಕ್ ತೀರ್ಥಭಾವಿ, ಗಂಗಾಧರ್ ಕಂಬಳಿ ಮಠ, ದೇವಣ್ಣ ಕಾಟಗಲ್ ರಮೇಶ್ ಭಂಡಾರಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಯ್ಯ ನಾಯಕ ಸಂತೆಕೆಲ್ಲೂರು, ವೀರಭದ್ರಪ್ಪ ಗೋನವಾರ್, ಡಾಕಪ್ಪ ರಾಥೋಡ್, ಹಾಗೂ ಪಕ್ಷದ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರುಗಳು ಶಕ್ತಿಕೇಂದ್ರದ ಪ್ರಮುಖರು ಮತ್ತು ಎಲ್ಲಾ ಗ್ರಾಮದ ಮುಖಂಡರು ಕಾರ್ಯಕರ್ತರು ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*