ಅಮೃತ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ಭೂಮಿ ಪೂಜೆ
ಮಸ್ಕಿ : ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಅಮೃತ ಯೋಜನೆಯಡಿ ₹42.47 ಕೋಟಿ ರೂ ಗಳ ಅನುದಾನ ಬಿಡುಗಡೆಯಾಗಿದೆ’ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ತುರುವಿಹಾಳ ಅವರು ತಿಳಿಸಿದರು.
ಪಟ್ಟಣದ ದೈವದ ಕಟ್ಟೆ ಬಳಿ ಕುಡಿಯುವ ನೀರು ಅಮೃತ ಯೋಜನೆ ಅಡಿಯಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್ ಗಳಿದ್ದು,ಮೂಲಸೌಕರ್ಯ
ಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರಿನ ಪೂರೈಕೆ ಕಾಮಗಾರಿಯನ್ನು ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಮುಗಿಸುವ ಜೊತೆಗೆ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ಸಾರ್ವಜನಿಕ ಆಸ್ತಿ - ಪಾಸ್ತಿ ಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದರು.
ಈ ವೇಳೆಯಲ್ಲಿ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ,ಉಪಾಧ್ಯಕ್ಷೆ ಗೀತಾ ಶಿವರಾಜ್ ಬುಕ್ಕಣ್ಣ,ಮಸ್ಕಿ ಸಹಕಾರಿ ಅಧ್ಯಕ್ಷ ನಾಗಭೂಷಣ ಬಾರಿಕೇರ, ಬಸನಗೌಡ ಪೊಲೀಸ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ,ಮಲ್ಲಯ್ಯ ಬಳ್ಳಾ,ಮಲ್ಲಯ್ಯ ಮುರಾರಿ, ರವಿ ಮಡಿವಾಳ, ಮಲ್ಲಿಕ್ ಮುರಾರಿ,ಪುರಸಭೆ ನಾಮ ನಿರ್ದೇಶನ ಸದಸ್ಯ ಕೃಷ್ಣ ಚಿಗಿರಿ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಹಾಗೂ ಅಧಿಕಾರಿಗಳು ಇದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ