ರಾಜ್ಯ ಸರ್ಕಾರ ತನ್ನ ರಕ್ಷಣೆಗಾಗಿ ಅಮಾಯಕ ಆಯುಕ್ತ ಬಿ.ದಯಾನಂದ ಅವರ ಅಮಾನತು ಖಂಡನೀಯ : ಆರ್. ಕೆ ನಾಯಕ

 

ಮಸ್ಕಿ : ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕೆ ಪ್ರಾಮಾಣಿಕ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿರುವುದು ಎಷ್ಟು ಸರಿ.! ನಾಯಕ ಸಮಾಜದ ಪ್ರಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಮುಗಿಸುವ ಷಡ್ಯಂತ್ರವೋ ಒಂದು ತಿಳಿಯುತ್ತಿಲ್ಲ ಸರ್ಕಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ತಮ್ಮ ದಡ್ಡತನ ಅಸಡ್ಡೆಯಿಂದ ಆಗಿರುವ ಅನಾಹುತಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳಬೇಕಿತ್ತು. ಆದರೆ ವಾಲ್ಮೀಕಿ ನಾಯಕ ಜನಾಂಗದ ದಕ್ಷ ಹಿರಿಯ ಪೊಲೀಸ್ ಅಧಿಕಾರಿ ಬೆಂಗಳೂರು ನಗರ ಆಯುಕ್ತರಾದ ಶ್ರೀ ಬಿ.ದಯಾನಂದ ಅವರ ಮೇಲೆ ಅಮಾನತು ಶಿಕ್ಷೆ ಕೊಟ್ಟಿರುವುದು ಯಾವ ನ್ಯಾಯ? ಎಂದು ಆರ್.ಕೆ ನಾಯಕ ರವರು ಸರಕಾರದ ವಿರುದ್ಧ ಪತ್ರಿಕಾ ಹೇಳಿಕೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ವಾಲ್ಮೀಕಿ ನಾಯಕ ಜನಾಂಗದ ಸಚಿವರುಗಳಿಗೆ ಶಾಸಕರುಗಳಿಗೆ ಸಮಾಜದ ಬಗ್ಗೆ ಸ್ವಲ್ಪವಾದರೂ ಕಾಳಜಿ ಇದ್ದರೆ ಇಂತಹ ಅನಾಹುತಗಳು ಆಗಲು ಬಿಡುತ್ತಿದ್ದಿಲ್ಲ.ಸರಕಾರ ವಾಲ್ಮೀಕಿ ಜನಾಂಗವನ್ನು ಗುರಿಯಾಗಿಸಿಕೊಂಡಿದೆಯಾ? ಈ ಘಟನೆಗೆ ಸಂಬಂಧಿಸಿದಂತೆ ಮಾನ್ಯ ಗೃಹ ಸಚಿವರು ಕಾರಣ ಅವರನ್ನು ಯಾಕೆ ಸಚಿವ ಸ್ಥಾನದಿಂದ ವಜಾಗೊಳಿಸಲಿಲ್ಲ ಎಂದು 

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕ ಅಧ್ಯಕ್ಷ ಆರ್.ಕೆ ನಾಯಕ ಎಚ್ಚರಿಕೆ ನೀಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*