೭೯ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ – ಕೆ ನೇಮಿರಾಜನಾಯ್ಕ ಶಾಸಕರು
ಕೊಟ್ಟೂರು :೭೯ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲು ಪೂರ್ವಸಿದ್ದತಾ ಸಭೆಯನ್ನು ಕೊಟ್ಟೂರು ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ನೇಮಿರಾಜನಾಯ್ಕ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಹಗರಿಬೊಮ್ಮನಹಳ್ಳ್ಗೆ ಧ್ವಧಜಾರೋಹಣ ಕಾರ್ಯಕ್ಕೆ ಹೋಗಬೇಕಾದ ಕಾರಣ ಕೊಟ್ಟೂರಿನಲ್ಲಿ ಎಲ್ಲಾ ಶಾಲಾ-ಕಾಲೇಜಿನಲ್ಲಿ ಬೆಳಿಗ್ಗೆ ೭.೦೦ ಗಂಟೆಗೆ ಧ್ವಜಾರೋಹಣ ನೆರವೇರಿಸಿಕೊಂಡು ತಾಲೂಕು ಮಟ್ಟದಲ್ಲಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೮.೦೦ ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಲು ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಕಾರ್ಯಕ್ರಮವನ್ನು ಯಾವುದೇ ರೀತಿಯಲ್ಲಿ ಲೋಪವಾಗದಂತೆ ಅಚ್ಚುಕಟ್ಟಾಗಿ ಆಚರಿಸಬೇಕು. ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಹಾಜರಿದ್ದು ಕಾರ್ಯಕ್ರಮ ಮುಗಿಯುವವರೆಗೂ ಇರಬೇಕು. ತಮಗೆ ವಹಿಸಿದ ಜವಾಬ್ದಾರಿಗಳನ್ನು ನಿರ್ಲಕ್ಷ ವಹಿಸದೇ ನಿರ್ವಹಿಸುವಂತೆ ತಿಳಿಸಿದರು. ದೇಶ ರಕ್ಷಣೆಗೆ ದುಡಿದು ನಿವೃತ್ತಿಯಾದ ಸೈನಿಕರಿಗೆ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ, ತಾಲೂಕಿನಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸುವಂತೆ ತಿಳಿಸಿದರು.
ತಹಶೀಲ್ದಾರರಾದ ಅಮರೇಶ ಜಿಕೆ ಇವರು ಹಾಜರಾದ ಎಲ್ಲರಿಗೂ ಸ್ವಾಗತವನ್ನು ಕೋರುತ್ತಾ, ನಿಗದಿತ ಸಮಯಕ್ಕೆ ಧ್ವಜಾರೋಹಣ ನೆರವೇರಿಸಲು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರು ಹಾಜರಿರುವಂತೆ ಕೋರುತ್ತಾ, ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ವಿನಂತಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿಯ ಎಡಿ ವಿಜಯಕುಮಾರ್ ಹೆಚ್, ಜೆಸ್ಕಾಂ ಎಇಇ ನಾಗರಾಜ್ ಆರ್ ಉಪಪ್ರಾಚಾರ್ಯರಾದ ವಿಠಲ್ ಕುಲಕರ್ಣಿ, ಪಿಎಸ್ಐ ಗೀತಾಂಜಲಿ ಸಿಂಧೆ, ಸಹಾಯಕ ಕೃಷಿ ನಿರ್ದೇಶಕರಾದ ಮಹಾಂತೇಶ ಜಿ, ಪಿಆರ್ಇ ಉಪವಿಭಾಗದ ಜೆಇ ರುದ್ರೇಶ ಬಿ, ಪ್ರಭಾರೆ ಕ್ಷೇತ್ರಶಿಕ್ಷಣಾಧಿಕಾರಿ ಜಗದೀಶ್, ಎಪಿಎಂಸಿ ಕಾರ್ಯದರ್ಶಿ ಎ ಕೆ ವೀರಣ್ಣ ಹಾಗೂ ಇತರೆ ಅಧಿಕಾರಿಗಳು , ಕಸಪ ಅಧ್ಯಕ್ಷರಾದ ದೇವರಮನಿ ಕೊಟ್ರೇಶ್, ನೌಕರರ ಸಂಘದ ಅಧ್ಯಕ್ಷರ ಯೋಗೀಶ್ವರ ದಿನ್ನೆ, ಡಿಎಸ್ಎಸ್ ಮುಖಂಡರಾದ ಬದ್ದಿ ಮರಿಸ್ವಾಮಿ, ಕಂದಗಲ್ ಪರಶುರಾಮ, ಹಾಗೂ ವಿವಿಧ ಸಂಘಟನೆಯ ಮುಖಂಡರು, ಶಿಕ್ಷಣ ಇಲಾಖೆಯ ಇಸಿಒ ನಿಂಗಪ್ಪ, ಬಿಆರ್ಪಿ, ಸಿಆರ್ಪಿಗಳು ಹಾಜರಿದ್ದರು. ಸಿ ಮ ಗುರುಬಸವರಾಜ ಕಾರ್ಯಕ್ರಮ ನಿರ್ವಹಿಸಿದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ