ಖಚಿತ ಮಾಹಿತಿ ಮೇರೆಗೆ ಮಾರಲದಿನ್ನಿ ತಾಂಡಾದಲ್ಲಿ ದಾಳಿ 10 ಲೀಟರ್ ಬೆಲ್ಲದ ಕೊಳೆ ಹಾಗೂ 2 ಲೀಟರ್ ಕಳ್ಳಭಟ್ಟಿ ಸರಾಯಿ ವಶ

 

ಮಸ್ಕಿ : ತಾಲೂಕಿನ ಮಾರಲದಿನ್ನಿ ತಾಂಡಾದ ಜ್ಯೋತಿ ಗಂಡ ಕುಮಾರ ಎಂಬಾಕೆಯು ತನ್ನ ವಾಸದ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ಸಂಗ್ರಹಿಸಿ ಇಟ್ಟಿರುವುದಾಗಿ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಕಳ್ಳಭಟ್ಟಿ ಸರಾಯಿ ಮತ್ತು ಬೆಲ್ಲದ ಕೊಳೆಯನ್ನು ಅಬಕಾರಿ ಇಲಾಖೆ ಲಿಂಗಸ್ಗೂರು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಾನ್ಯ ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ) ಕೇಂದ್ರ ಸ್ಥಾನ ಬೆಳಗಾವಿ ರವರ ಆದೇಶದ ಪ್ರಕಾರ, 

ಮಾನ್ಯ ಅಬಕಾರಿ ಜಂಟಿ ಆಯುಕ್ತರು ಕಲ್ಬುರ್ಗಿ ವಿಭಾಗ ರವರ, ಮಾನ್ಯ ಅಬಕಾರಿ ಉಪ ಆಯುಕ್ತರು ರಾಯಚೂರು ಜಿಲ್ಲೆ ರವರ ಹಾಗೂ ಮಾನ್ಯ ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ರಾಯಚೂರು ರವರ ಮಾರ್ಗದರ್ಶನದಲ್ಲಿ,

 ಆಗಸ್ಟ್ 26 ಮಂಗಳವಾರ ರಂದು ಮೂಡಲದಿನ್ನಿ ಕ್ರಾಸ್ ನಲ್ಲಿ ಕಚೇರಿಯ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಯೊಂದಿಗೆ ಕೂಡಿಕೊಂಡು ಗಸ್ತು ಮಾಡುತ್ತಿರುವ ಸಮಯದಲ್ಲಿ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದ ಜ್ಯೋತಿ ಗಂಡ ಕುಮಾರ ಎಂಬಾಕೆಯು ತನ್ನ ವಾಸದ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ಸಂಗ್ರಹಿಸಿ ಇಟ್ಟಿರುವುದಾಗಿ ಬಂದ ಖಚಿತ ಮಾಹಿತಿಯ ಮೇರೆಗೆ ಪಂಚರನ್ನು ನೇಮಕ ಮಾಡಿಕೊಂಡು ಜ್ಯೋತಿ ಗಂಡ ಕುಮಾರ ಈಕೆಯ ವಾಸದ ಮನೆಯ ಮೇಲೆ ಅಬಕಾರಿ ದಾಳಿ ಮಾಡಿದಾಗ 02 ಲೀಟರ್ ಕಳ್ಳಭಟ್ಟಿ ಸರಾಯಿ ಹಾಗೂ 10 ಲೀಟರ್ ಬೆಲ್ಲದ ಕೊಳೆ ಪತ್ತೆಯಾಗಿದ್ದು, ಸದರಿ ಆರೋಪಿತಳು ದಾಳಿ ಸಮಯದಲ್ಲಿ ಪರಾರಿಯಾಗಿದ್ದು, ಪರಾರಿತ ಆರೋಪಿತಳ ವಿರುದ್ಧ ಘೋರ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕಚೇರಿ ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿಅಬಕಾರಿ ಉಪ ನಿರೀಕ್ಷಕರಾದ ಮೊಹಮ್ಮದ ಹುಸೇನ್,ಮಂಜುನಾಥ್ ಅಬಕಾರಿ ಮುಖ್ಯಪೇದೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*