ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹೋರಾಟಗಾರರ ಸ್ಮರಣೆ ದೇಶಭಕ್ತಿಯ ಅನುಕರಣೆ . ಬಹುಜನರ ಒಳಿತಿಗಾಗಿ ಬಹು ಜನರ ಕಲ್ಯಾಣಕ್ಕಾಗಿ ಎಂಬ ಮಂತ್ರವನ್ನು ಸಾರುತ್ತ ಭವ್ಯ ಭಾರತ ಕಟ್ಟುವ ಸಂಕಲ್ಪ ಮಾಡೋಣ ಭಾರತಕ್ಕೊಂದು ಹೊಸ ಬಾಷ್ಯ ಬರೆಯೋಣ : ಶಿವರಾಜ್ ತಂಗಡಗಿ ಜಿಲ್ಲಾ ಉಸ್ತುವಾರಿ ಸಚಿವ.

 

 ವರದಿ - ಮಂಜುನಾಥ ಕೋಳೂರು ಕೊಪ್ಪಳ 

ಕೊಪ್ಪಳ ಆಗಸ್ಟ್ 15 : - ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಕೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಶುಕ್ರವಾರ ರಾಷ್ಟ್ರ ಧ್ವಜ ರೋಹಣ ನೆರವೇರಿಸಿದರು. 

ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ದೇಶಭಕ್ತಿಗೆ ಪ್ರೇರೇಪಿಸುವ ಹಾಡುಗಳಿಗೆ ಹೆಜ್ಜೆ ಹಾಕಿ ವಿಜೃಂಭಣೆಯಿಂದಸಂಭ್ರಮ ಪಟ್ಟರು. ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ತಮ್ಮ ಭಾಷಣದಲ್ಲಿ ಸ್ಮರಿಸಿದ ಸಚಿವರು ಹೋರಾಟಗಾರರು ಪ್ರತಿಯೊಬ್ಬರು ಭಾರತೀಯರ ಮನದಲ್ಲಿ ಅಮರವಾಗಿದ್ದಾರ 

ಮಹಾತ್ಮ ಗಾಂಧಿ ಜಿ, ಸುಭಾಷ್ ಚಂದ್ರ ಬೋಸ್ , ಡಾ// ಬಿ .ಆರ್. ಅಂಬೇಡ್ಕರ , ಸರ್ದಾರ್ ವಲ್ಲಬಾಯ್ ಪಟೇಲ್ , ಲಾಲ್ ಬಹದ್ದೂರ ಶಾಸ್ತ್ರಿ ,ಗೋಪಾಲಕೃಷ್ಣ ಗೋಖಲೆ , ಬಾಲಗಂಗಾಧರ್ ತಿಲಕ್ ಹೀಗೆ ಅನೇಕ ಪ್ರಾಣತ್ಯಾಗಮಾಡಿದ್ದಾರೆ ಎಂದರು . ಬಹು ಜನರ ಒಳಿತಿಗಾಗಿ ಬಹು ಜನರ ಕಲ್ಯಾಣಕ್ಕಾಗಿ ಎಂಬ ಮಂತ್ರವನ್ನು ಸಾರುತ್ತ ಭವ್ಯ ಭಾರತ ಕಟ್ಟುವ ಸಂಕಲ್ಪ ಮಾಡೋಣ ಭಾರತಕ್ಕೊಂದು ಹೊಸ ಭಾಷ್ಯ ಬರೆಯೋಣ ಎಂದರು . ಜಿಲ್ಲೆಯ ಹೋರಾಟಗಾರರು ನೀಡಿದ ಕೊಡುಗೆಯನ್ನು ಕೊಂಡಾಡಿದರು.

 ನಂತರ ರಾಜ್ಯ ಸರ್ಕಾರದ ಪಂಚ್ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿ ಹಿಂದಿನ ಎರಡುವರೆ ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಈ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪಥಸಂಚಲ ಪೊಲೀಸ ಇಲಾಖೆ, ಸಶಸ್ತ್ರ ಮೀಸಲು ಪಡೆ ,ಗೃಹರಕ್ಷಕ ದಳ ,ಭಾರತ ಸೇವಾದಳ , ಎನ್‌ಸಿಸಿ,ಭಾರತ ಸ್ಕೌಟ್ ಮತ್ತು ಗೈಡ್ಸ್ ಸೇರಿದಂತೆ ಅನೇಕ ತಂಡಗಳು ನಡೆಸಿದ ಪದ ಸಂಚಲನೆ ಆಕರ್ಷಣೀಯವಾಗಿತ್ತು. ಇದೇ ಸಂದರ್ಭದಲ್ಲಿ ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಸ್ವಾತಂತ್ರ ಹೋರಾಟಗಾರ ಹನುಮಂತ ಗೌಡ ಪಾಟೀಲ್ , ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ರೈತ ದೇವೇಂದ್ರಪ್ಪ ಬಳೂಟಗಿ , ರಾಷ್ಟ್ರಪತಿ ಪದಕ ಪಡೆದ ಶಂಶುದ್ದೀನ್ , ಮುಖ್ಯಮಂತ್ರಿಗಳ ಪದಕ ಪಡೆದ ಪೊಲೀಸ್ ಇಲಾಖೆಯ ಭೀಮಸೇನರಾವ್ ಕುಲಕರ್ಣಿ, ಸಿಪಿಐ ಮೌನೇಶ್ವರ ಮಾಲಿಪಾಟೀಲ, ಪರಶುರಾಮ ಗರೆಬಾಳ್ ಸೇರಿದಂತೆ ಹಲವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು .

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಜಿಲ್ಲೆಯ ಮತ್ತು ಕೊಪ್ಪಳ ತಾಲೂಕಿನ ತಲಾ ಮೂರು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ .ರಾಘವೇಂದ್ರ ಹಿಟ್ನಾಳ ವಹಿಸಿದ್ದರು. 

ಸಂಸದ ಕೆ ರಾಜಶೇಖರ್ ಹಿಟ್ನಾಳ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಗುಪ್ತ ,ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಜಿಲ್ಲಾಧಿಕಾರಿ ಸುರೇಶ್ .ಬಿ .ಇಟ್ನಾಳ್ , ಜಿಲ್ಲಾ ಪಂಚಾಯತಿ ಸಿಇಓ ವರ್ಣಿತ ನೇಗಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ , ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ಧರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲ್ಗತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್ , ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬ್ ಗೌಡರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*