ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಆದ್ಯತೆ ನೀಡಿ: ಶಾಸಕ ಕೆ ನೇಮಿರಾಜ್ ನಾಯ್ಕ್
ಕೊಟ್ಟೂರು : ತಾಲೂಕಿನ ಹ್ಯಾಳ್ಯ ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕ್ಲಸ್ಟರ್ ಮಟ್ಟಡದ ಪ್ರೌಢಶಾಲೆಯ ಕ್ರೀಡಾಕೂಟವನ್ನು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ ನೇಮಿರಾಜ್ ನಾಯ್ಕ್ ಅವರು
ಗುರುವಾರ ಕ್ರೀಡಾ ಜ್ಯೋತಿ ಬೆಳಗಿಸುವ ಮುಖಾಂತರ ಉದ್ಘಾಟನೆ ಮಾಡಲಾಯಿತು. ಶಾಸಕರು,ಹ್ಯಾಳ್ಯ ಗ್ರಾಮ ಪಂಚಾಯತಿ ಅಧ್ಯಕ್ಷೆ ಡಿ ಹಾಲಮ್ಮ ನಿಜೇಶ್ ಕುಮಾರ್ ಹಾಗೂ ಹ್ಯಾಳ್ಯ ಗ್ರಾಮದ ಪ್ರೌಢಶಾಲೆಯ ನೂತನ ಅಡಿಗೆ ಕೊಠಡಿಯನ್ನು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು
ನಂತರ ಶಾಸಕರು ಮಾತನಾಡಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯ’‘ಮಕ್ಕಳ ಆಸಕ್ತಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಮಿಂಚಲಿ’ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಂ. ಎಂ. ಜೆ.ಹರ್ಷವರ್ಧನ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದೊಡ್ಡರಾಮಣ್ಣನವರು ಬೂದಿ ಶಿವಕುಮಾರ್,ಗ್ರಾಮ ಪಂಚಾಯತಿಯ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಊರಿನ ಮುಖಂಡರು ಕಾರ್ಯಕರ್ತರು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು



ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ