ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಿ : ಪಲ್ಲವಿ

 

ಕೊಟ್ಟೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಜಾರಿ ಮಾಡಿರುವ ಯೋಜನೆಗಳನ್ನು ಪಾರದರ್ಶಕವಾಗಿ ತಲುಪಿಸಬೇಕೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಸೂಚಿಸಿದರು.

ತಾಲ್ಲೂಕಿನ ಬತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಕುಂದು ಕೊರತೆ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿ ಅಲೆಮಾರಿ ಜನಾಂಗ ಸ್ಥಿರವಾಗಿ ಒಂದು ಕಡೆ ನೆಲೆಸುವಂತೆ ನಿಗಮದಿಂದ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಸಮುದಾಯದವರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢ ಜೀವನ ಕಟ್ಟಿಕೊಳ್ಳಲು ಮುಂದಾಗಬೇಕೆಂದರು.

 ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಆದ್ಯತೆ ನೀಡಬೇಕು ಹಾಗೂ ಸ್ವಯಂ ಉದ್ಯೋಗ ಮುಂತಾದ ಕೆಲಸಗಳಲ್ಲಿ ನಿರತರಾಗಿ ಜೀವನದಲ್ಲಿ ಭದ್ರತೆ ಕಂಡುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಸಮುದಾಯಕ್ಕೆ ಮೀಸಲಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳು ಸಹ ಕಾರ್ಯನ್ಮೋಖರಾಗಬೇಕು ಎಂದರು.

ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಅನ್ನದಾನೇಶ ಬಿ.ಪತ್ತಾರ್, ಸಮಾಜ ಕಲ್ಯಾಣ ಇಲಾಖಾಧಿಕಾರಿ ಜಗದೀಶ್ ದಿಗಡೂರು ಹಾಗೂ ವಿವಿಧ ಇಲಾಖಾಧಿಕಾರಿಗಳು, ಅಖಿಲ ಕರ್ನಾಟಕ ಕುಳವ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಏಕಲವ್ಯ,ಹಿರಿಯ ಮುಖಂಡರು ಕೆ ಹಾಲಪ್ಪ, ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಸದಸ್ಯರು, ಮುಖಂಡರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*