ವಾಲಿಬಾಲ್ : ತುಂಗ ಭದ್ರಾ ಪದವಿ ಪೂರ್ವ ಕಾಲೇಜು ಜಿಲ್ಲಾಮಟ್ಟಕ್ಕೆ ಆಯ್ಕೆ

 

ಮಸ್ಕಿ : ಪಟ್ಟಣದ ಕೇಂದ್ರ ಶಾಲೆ ಆವರಣದಲ್ಲಿ ರಾಯಚೂರು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಸ್ಕಿ ತಾಲೂಕು ಖಾಸಗಿ ಕಾಲೇಜುಗಳ ಪ್ರಾಚಾರ್ಯರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ತುಂಗಭದ್ರಾ ಪದವಿ ಪೂರ್ವ ಕಾಲೇಜು ಮುದ್ದಾಪುರ ಕ್ರಾಸ್ ನ ವಿದ್ಯಾರ್ಥಿನಿಯರು ವಾಲಿಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಲಕ್ಷ್ಮಣ ಕರ್ಲಿ ಅವರು ಪತ್ರಿಕೆಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಮಹದೇವಪ್ಪಗೌಡ ಪೋಲೀಸ್ ಪಾಟೀಲ್,ಕಾರ್ಯದರ್ಶಿ ರಾಮಣ್ಣ ನಾಯಕ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*