ಕೊಟ್ಟೂರು ತಾಲೂಕು ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕೊಟ್ಟೂರು ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಕೊಟ್ಟೂರು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ಶ್ರೀ ಡಾ.ಬಾಳಪ್ಪನವರ ಆನಂದಕುಮಾರ್ ರವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟಂತಹ ಮಹಾನೀಯರನ್ನು ಭಾರತದ ಪ್ರಜೆಗಳಾದ ನಾವು ಸ್ಮರಿಸಬೇಕು. ಬ್ರಿಟೀಷರನ್ನು ದೇಶದಿಂದ ಹೊರದೂಡಲು ನಡೆದಂತಹ ನಿರಂತರ ಹೋರಾಟ, ಚಳುವಳಿಗಳ ನಿಜ ದರ್ಶನವನ್ನು ಇಂದಿನ ಪೀಳಿಗೆಗೆ ತಿಳಿಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಟ್ಟೂರು ತಾಲೂಕು ಪಂಚಾಯಿತಿಗೆ ಸರ್ಕಾರದಿಂದ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುವ ಶ್ರೀ ಕೆ.ಪರಸಪ್ಪ, ಶ್ರೀ ಎ.ಎಂ.ಹಾಲಯ್ಯ, ಶ್ರೀ ಗಂಗಾಧರ, ಶ್ರೀ ಅಣ್ಣೀಗೆರೆ ಬುಡೇನ್ ಸಾಬ್, ಶ್ರೀಮತಿ ದೀಪಾ, ಶ್ರೀ ಕೊಡದಪ್ಪ, ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಎಚ್. ವಿಜಯಕುಮಾರ್, ವ್ಯವಸ್ಥಾಪಕರಾದ ಶ್ರೀಮತಿ ಪುಷ್ಪಲತಾ, ತಾಲೂಕು ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು, ನರೇಗಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ