ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

 

ಕೊಟ್ಟೂರು: ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಡವಾಗಲು ಕ್ರೀಡೆಗಳು ಸಹಕಾರಿ ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು.

ತಾಲ್ಲೂಕಿನ ಕೋಗಳಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ ಪಿಯು ಹಂತ ವಿದ್ಯಾರ್ಥಿ ಜೀವನದಲ್ಲಿ ಮುಖ್ಯ ಘಟ್ಟವಾಗಿದ್ದು ಪಠ್ಯೇದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಭಾಗವಹಿಸುವಂತಹ ಮನೋಭಾವ ವಿದ್ಯಾರ್ಥಿಗಳಲ್ಲಿರಬೇಕು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ಗ್ರಾ.ಪಂ.ಅಧ್ಯಕ್ಷೆ ರೇಣುಕಾ ಪಿ.ಸಮಾದೆಪ್ಪ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಗೌಡ್ರು ಬಸವರಾಜ್, ತಾಲ್ಲೂಕು ಅಧ್ಯಕ್ಷ ಜಗದೀಶ ಚಮದ್ರ ಭೋಸ್, ಪಿ.ಎ.ಸಿ.ಎಸ್. ಅಧ್ಯಕ್ಷ ಎನ್.ಹೇಮಗಿರಿಗೌಡ, ವಿ.ಎಸ್.ಎಸ್.ಎನ್. ಅಧ್ಯಕ್ಷ ಕೆ.ಚಂದ್ರಶೇಖರ್, ಪಿ.ಯು. ಕಾಲೇಜುಗಳ ಪ್ರಾಂಶುಪಾಲರಾದ ಜಿ.ಸೋಮಶೇಖರ್, ಎಂ.ಎಚ್. ಪ್ರಶಾಂತಕುಮಾರ್, ಕೆ.ಎಂ.ಜಯಣ್ಣ, ಬಿ.ಪಿ.ತಿಪ್ಪೇಸ್ವಾಮಿ, ನಿರ್ಮಲಶಿವನಗುತ್ತಿ, ಅನುಪಮ ಭೂಸನೂರಮಠ್, ಪವನ್ ಕುಮಾರ್, ಆರ್.ಮಧುಸೂಧನ್, ಪಿ.ಟಿ. ಸಂತೋಷ್ ಕುಮಾರ್, ರೇಣುಕಾ ಹೊಸಮನಿ, ಹಾಗೂ ಉಪನ್ಯಾಸಕರು, ದೈಹಿಕ ಶಿಕ್ಷಣ ನಿರ್ದೇಶಕರು ಮುಖಂಡರಾದ ಡಿಎಸ್ಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಕೋಗಳಿ ಉಮೇಶ್, ಅನೇಕಲ್ ಲಿಂಗರಾಜ್, ಸರ್ದಾರ್ ಯಮನೂರಪ್ಪ, ಬಡಿಗೇರ್ ಸಿದ್ಧರಾಜ್, ರವಿ, ಕನ್ನಹಳ್ಳಿ ಚಂದ್ರಶೇಖರ್, ಎಂ.ಹನುಮಂತಪ್ಪ, ಮರುಳಸಿದ್ಧಯ್ಯ, ಕಲ್ಯಾಣ ಸ್ವಾಮಿ, ಸಿದ್ಧಪ್ಪ ಮುಂತಾದವರು ಪಾಲ್ಗೊಂಡಿದ್ದರು.

ಬಾಕ್ಷ್ ಐಟಂ ;

ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ

ಕೊಟ್ಟೂರು: ಕ್ಷೇತ್ರದಾದ್ಯಂತ ಶಿಕ್ಷಣ, ಆರೋಗ್ಯ ಹಾಗೂ ಮೂಲ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡುವ ಮೂಲಕ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುವುದಾಗಿ ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.

ತಾಲ್ಲೂಕಿನ ಕೋಗಳಿ ಗ್ರಾಮದ ಸರ್ಕಾರ ಪ್ರೌಢ ಶಾಲೆಯಲ್ಲಿ ಬುಧವಾರ ಬಿಸಿ ಊಟ ಕೊಠಡಿ ಹಾಗೂ ಗ್ರಂಥಾಲಯ ಕೊಠಡಿ ಉದ್ಘಾಟಿಸಿ ಮಾತನಾಡಿ ಕ್ಷೇತ್ರದಲ್ಲಿನ ಶಾಲೆ ಕಾಲೇಜುಗಳಿಗೆ ನೂತನ ಕೊಠಡಿಗಳು ಹಾಗೂ ಇತರೆ ಅಭಿವೃದ್ಧಿಗಾಗಿ ಇದುವರೆಗೂ ರೂ. 60 ಕೋಟಿ ಅನುದಾನ ವೆಚ್ಚ ಮಾಡಲಾಗಿದೆ ಎಂದರು.

ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟೂರು ತಾಲ್ಲೂಕು ಹೆಸರಾಗಿದ್ದು ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇನ್ನೂ ಹೆಚ್ಚಿನ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಪ್ರಯತ್ನಿಸುವುದಾಗಿ ಹೇಳಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*