ದಲಿತ ಮಹಿಳೆಗೆ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್ಐಆರ್

 

 ವರದಿ - ಮಂಜುನಾಥ್ ಕೋಳೂರು, ಕೊಪ್ಪಳ 

ಕೊಪ್ಪಳ ಸೆಪ್ಟಂಬರ್ 17 : - ದಲಿತ ಮಹಿಳೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್ಐಆರ್ ದಾಖಲಾಗಿದೆ .

 ಯತ್ನಾಳ್ ಸುದ್ದಿ ವಾಹಿನಿ ಯೊಂದಕ್ಕೆ' ನಾಡ ಹಬ್ಬದ ದಸರಾ ಉದ್ಘಾಟನೆ ಮಾಡುತ್ತಿರುವವರ ಬಗ್ಗೆ ಹೇಳಿಕೆ ನೀಡುವ ಬರದಲ್ಲಿ ಯತ್ನಾಳ್ ಸನಾತನ ಧರ್ಮದವರು ಮಾತ್ರ ದಸರಾದಲ್ಲಿ ಚಾಮುಂಡಿ ದೇವಿಗೆ ಹೂ ಮುಡಿಸಬೇಕು ಹೊರತು ದಲಿತ ಮಹಿಳೆಗೂ ಇದಕ್ಕೆ ಅವಕಾಶವಿಲ್ಲ 'ಎಂದಿದ್ದರು.

 'ದಲಿತ ಮಹಿಳೆಯರಿಗೆ ಹೂ ಮುಡಿಸಲು ಅವಕಾಶವಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ದಲಿತ ಸಮುದಾಯಕ್ಕೆ ಅವರು ಅವಮಾನ ಮಾಡಿದ್ದಾರೆ ಯತ್ನಾಳ್ ನಿತ್ಯ ಪ್ರಚೋದನಕಾರಿ ಹಾಗೂ ಕೋಮು ಸಂಘರ್ಷದ ಹೇಳಿಕೆಗಳನ್ನು ನೀಡುತ್ತಿದ್ದು , 


ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು' ಎಂದು ದಲಿತ ಸಮುದಾಯದ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ನೀಡಿದ ದೂರಿನ ಮೇರೆಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆ-1989( U/s- 3(1)(s); ಹಾಗೂ ಭಾರತೀಯ ನ್ಯಾಯ ಸಹಿತ( ಬಿ ಎನ್ ಎಸ್) 2023 (U/s -352) ಕಾಯ್ದೆಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*