ಚಿಕ್ಕದಿನ್ನಿ : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಯಶಸ್ವಿ

 

ಮಸ್ಕಿ : ತಾಲೂಕಿನ ತೋರಣದಿನ್ನಿ ವಲಯದ ಚಿಕ್ಕದಿನ್ನಿಯಲ್ಲಿ ಕಾರ್ಯ ಕ್ಷೇತ್ರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭ ಮಾಡಿದರು.   

ಯೋಜನಾಧಿಕಾರಿಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ನೀಡಲಾಗುವ ಯೋಜನೆಗಳಿಂದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಾನವ ಸಂಪನ್ಮೂಲ ವ್ಯಕ್ತಿ ಗಳಾದ ಶಾಂತಪ್ಪ ಅವರು ಮಕ್ಕಳು ದುಶ್ಚಟದಿಂದ ಹಾಗೂ ಮೊಬೈಲ್ ಬಳಕೆಯಿಂದ ದೂರ ಇರುವುದರ ಬಗ್ಗೆ ಮಾಹಿತಿ ನೀಡಿದರು.

ಶಾಲೆಯ ಶಿಕ್ಷಕರು ಆದಂತಹ ಬಸವರಾಜ್ ಅವರು ನಮ್ಮ ಮಕ್ಕಳಿಗೆ ಯೋಜನೆಯಿಂದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೌಲಭ್ಯಗಳು ಎಲ್ಲಾ ಮಕ್ಕಳಿಗೆ ಸಿಗಲಿ ಎಂದು ಹಾರೈಸಿದರು

ಇದೇ ಸಂದರ್ಭದಲ್ಲಿ ಯೋಜನಾಧಿಕಾರಿ ಜಗದೀಶ್ ಬಂಡಾರಿ, ಜ್ಞಾನಾಕ್ಷಿ ವಿದ್ಯಾಲಯದ ಮುಖ್ಯೋಪಾಧ್ಯಾಯರಾದ ಶ್ವೇತಾ, ಮಾನವ ಸಂಪನ್ಮೂಲ ವ್ಯಕ್ತಿಗಳಾದ ಶಾಂತಪ್ಪ ವಲಯದ ಮೇಲ್ವಿಚಾರಕರು ಮತ್ತು ಮುದ್ದು ಮಕ್ಕಳು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*