ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

 

ಕೊಟ್ಟೂರು : ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ದಿನಾಂಕ 17-09-2025 ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ. ರವಿಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷತೆ ವಹಿಸಿದರು.

ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ಕಲ್ಯಾಣ ಕರ್ನಾಟಕ ಹಾಗೂ ಹೈದರಾಬಾದ್ ವಿಮೋಚನಾ ದಿನಾಚರಣೆ ಕುರಿತು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟರು. ಹೈದರಾಬಾದ್ ನಿಜಾಂ ಉಸ್ಮಾನ್ ಅಲಿ ಖಾನ್ ಹಾಗೂ ರಜಾಕ್‌ಕಾರರು ಜನರ ಮೇಲೆ ನಡೆಸಿದ ದಬ್ಬಾಳಿಕೆ, ಅಹಿಂಸೆ, ಲೈಂಗಿಕ ದೌರ್ಜನ್ಯ ಮುಂತಾದ ಹಿಂಸೆಗಳನ್ನು ವಿವರಿಸಿದರು.

ಅವರು ಮುಂದುವರೆದು “ಉಕ್ಕಿನ ಮನುಷ್ಯ” ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಾತ್ರವನ್ನು ನೆನಪಿಸಿಕೊಂಡರು. ಪಟೇಲ್ ಅವರ ಕಠಿಣ ರಾಜಕೀಯ ತೀರ್ಮಾನಶಕ್ತಿ ಹಾಗೂ ಆಪರೇಷನ್ ಪೋಲೋ ಮೂಲಕ ನಿಜಾಂ ಆಡಳಿತವನ್ನು ಕೊನೆಗೊಳಿಸಲಾಯಿತು. ಅದೇ ವೇಳೆ ಡಾ. ಅಂಬೇಡ್ಕರ್ ಅವರು ಭಾರತದ ಸಂವಿಧಾನದಲ್ಲಿ ಕಲಂ 371(ಜ) ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಹಕ್ಕುಗಳು, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿ ಅವಕಾಶಗಳನ್ನು ಒದಗಿಸುವ ದಾರಿ ಮಾಡಿಕೊಟ್ಟರು ಎಂದು ಹೇಳಿದರು.

ಅವರು “ಅಂಬೇಡ್ಕರ್ ಅವರ ದೃಷ್ಟಿಕೋನವೇ ಹಿಂದುಳಿದ ವರ್ಗದ ಜನರಿಗೆ ನ್ಯಾಯ, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಸಮಾನಾವಕಾಶ ಕಲ್ಪಿಸುವ ಕೆಲಸ ಮಾಡಿತು” ಎಂದು ವಿದ್ಯಾರ್ಥಿಗಳಿಗೆ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರಾದ ಡಾ. ಪೃಥ್ವಿರಾಜ ಬೆಡ್ಜರ್ಗಿ, ಪದವಿಪೂರ್ವ ಪ್ರಾಂಶುಪಾಲರಾದ ಪ್ರಶಾಂತ್ ಕುಮಾರ್ ಎಂ. ಹೆಚ್., ಸಿ. ಬಸವರಾಜ್, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶಿವಕುಮಾರ್ ಸೇರಿದಂತೆ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮವನ್ನು ಉಪನ್ಯಾಸಕ ಪ್ರಭಾಕರ್ ನಿರೂಪಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*