ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ವ್ಯಾಪಕ ಪ್ರಚಾರ ಸಿಗಲಿ ಜಿ.ಪಂ ಉಪ ಕಾರ್ಯದರ್ಶಿ ಹಾಲ ಸಿದ್ದಪ್ಪ ಪೂಜೇರಿ ಸಲಹೆ
ಮಸ್ಕಿ : ಪಟ್ಟಣದ ತಾಲೂಕು ಪಂಚಾಯತಿ, ತಹಸೀಲ್ದಾರ್ ಕಚೇರಿಗೆ ಜಿಪಂ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜೇರಿ ಅವರು ಶನಿವಾರ ಭೇಟಿ ನೀಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಮಾಹಿತಿ ಪಡೆದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಮೀಕ್ಷೆಯ ನೋಡಲ್ ಅಧಿಕಾರಿಗಳೊಂದಿಗೆ ವಿ.ಸಿ ಮೂಲಕ ಸಭೆ ನಡೆಸಿದರು. ರಾಜ್ಯ ಸರ್ಕಾರದಿಂದ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತು ವ್ಯಾಪಕ ಪ್ರಚಾರ ಕೈಗೊಂಡು, ಪ್ರತಿಯೊಂದು ಕುಟುಂಬದ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಪಡೆದು, ತಂತ್ರಾಂಶದಲ್ಲಿ ದಾಖಲಿಸಬೇಕು. ಗ್ರಾಮ ಪಂಚಾಯತಿ ಮಟ್ಟದ ಸ್ವ ಸಹಾಯ ಗುಂಪುಗಳ ಮಹಿಳೆಯರು ಸಮೀಕ್ಷೆ ಕುರಿತು ಗ್ರಾಮೀಣರಲ್ಲಿ ಜಾಗೃತಿ ಮೂಡಿಸಬೇಕು. ಸಮೀಕ್ಷೆ ಯಶಸ್ಸಿಗೆ ಗ್ರಾಮ ಪಂಚಾಯತಿಯಿಂದ ಸಂಪೂರ್ಣ ಸಹಕಾರ ಒದಗಿಸಬೇಕು. ಗಣತಿದಾರರು ಪ್ರತಿ ದಿನ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಮೂರು ನಾಲ್ಕು ದಿನಗಳ ಒಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದರು.
ತದ ನಂತರ ಉದ್ಬಾಳ ಗ್ರಾಮ ಪಂಚಾಯತಿಯ ಕ್ಯಾತ್ನಟ್ಟಿ, ಚಿಕ್ಕಕಡಬೂರು, ಉದ್ಬಾಳ ಗ್ರಾಮಕ್ಕೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ವೀಕ್ಷಿಸಿ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಮರೇಶ್, ವ್ಯವಸ್ಥಾಪಕರಾದ ಗಂಗಾಧರ ಮೂರ್ತಿ, ಸಿಬ್ಬಂದಿಗಳಾದ ಚಂದ್ರಶೇಖರ, ಬಸವರಾಜ್, ಉದ್ಬಾಳ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ್, ತಾ.ಪಂ ಸಿಬ್ಬಂದಿ ಮೌನೇಶ್, ಪ್ರಕಾಶ್, ಅರ್ಜುನ್, ಲಕ್ಷ್ಮಣ ಇತರರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ