ರಾಜ್ಯ ಸರ್ಕಾರದ ಇಂದಿರಾ ಕಿಟ್ ಮತ್ತೊಂದು ವರ


ಗ್ಯಾರಂಟಿ ಯೋಜನೆಗಳನ್ನು ನೀಡಿ, ಸೈ ಎನ್ನಿಸಿಕೊಂಡಿದ್ದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಕಲ್ಯಾಣಕಾರಿ ಕೆಲಸಕ್ಕೆ ಕೈ ಹಾಕಿದೆ. ಬರೀ ಅಕ್ಕಿ ಕೊಟ್ಟರೆ ಸಾಲದು, ಬಡತನ ರೇಖೆಗಿಂತ ಕೆಳಗೆ ಇರುವ ಎಲ್ಲಾ ನಾಗರಿಕರು ನೆಮ್ಮದಿ ಜೀವನ ಕಂಡುಕೊಳ್ಳಬೇಕು ಎಂಬ ಉದ್ದೇಶದಿಂದ ಇದೀಗ ರಾಜ್ಯ ಸರ್ಕಾರ ಇಂದಿರಾ ಕಿಟ್ ನೀಡುವ ಯೋಜನೆ ಆರಂಭಿಸಿದೆ  ಎಂದು ಕೆಪಿಸಿಸಿ ವಕ್ತಾರ, ರಾಜ್ಯ ಪ್ರಚಾರ ಸಮಿತಿ ಸಂಯೋಜಕ ವೆಂಕಟೇಶ್ ಹೆಗಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

10 ಕೆಜಿ ಅಕ್ಕಿ ನೀಡುವುದರಿಂದ ನೆಮ್ಮದಿಯ ಜೀವನ ಸಾಗಲು ಆಗದು ಎಂದು ಮನಗಂಡ ರಾಜ್ಯ ಸರ್ಕಾರ ಇದೀಗ 5 ಕೆಜಿ ಅಕ್ಕಿ ನೀಡಿ, ಇನ್ನೂ 5 ಕೆಜಿ ಅಕ್ಕಿ ಬದಲು 2 ಕೆಜಿ ತೊಗರಿ ಬೇಳೆ, ಒಂದು ಕೆಜಿ ಎಣ್ಣೆ, ಒಂದು ಕೆಜಿ ಉಪ್ಪು ನೀಡಲು ನಿರ್ಧಾರ ಮಾಡಿದೆ. ಇದರಿಂದ ಅಕ್ಕಿಯ ಕಾಳಸಂತೆ ದಂಧೆಗೆ ಲಗಾಮು ಬಿದ್ದಂತೆ ಆಗುತ್ತದೆ ಅಲ್ಲದೆ ಜನರಿಗೆ ಸಾಕಷ್ಟು ನೆರವಾಗಲಿದೆ. ಬಡ ಕುಟುಂಬಗಳು ನೆಮ್ಮದಿಯ ಜೀವನ ಕಟ್ಟಿಕೊಳ್ಳಬಹುದಾಗಿದೆ.

ಕೇಂದ್ರ ಸರ್ಕಾರದ ಇಂದಿನ ಆರ್ಥಿಕ ನೀತಿ ಬಡವರ ವಿರೋಧಿ ಆಗಿದೆ. ದಿನದಿಂದ ದಿನಕ್ಕೆ ಬೆಲೆ ಏರಿಕೆಯಿಂದ ಬಡ, ಮಧ್ಯಮ ವರ್ಗದ ಜನರು ದಿನನಿತ್ಯ ಬದುಕು ಕಟ್ಟಿಕೊಳ್ಳಲು ಹೆಣಗಾಡುವಂತೆ ಆಗಿದೆ. ಇದನ್ನು ಕಂಡೇ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆ ಆರಂಭಿಸಿತ್ತು. ಆದರೆ, ಇದೂ ಸಹ ಸಾಲದು ಎಂಬುದನ್ನು ಅರಿತು ಇದೀಗ ಅಕ್ಕಿ ಜೊತೆ ಎಣ್ಣೆ, ಬೇಳೆ, ಉಪ್ಪು ವಿತರಿಸುವ ಕಾರ್ಯ ಆರಂಭಿಸಿದೆ.

ಇದರ ಜೊತೆಗೆ ಮಹಿಳಾ ಆರೋಗ್ಯ ಗಮನದಲ್ಲಿಟ್ಟುಕೊಂಡು ಋತುಚಕ್ರದ ಸಂದರ್ಭದಲ್ಲಿ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ಕಡ್ಡಾಯ ವೇತನ ಸಹಿತ ರಜೆ ನೀಡಲು ಸೂಚಿಸಿದೆ. ಇದು ನಿಜಕ್ಕೂ ಮಹಿಳಾ ಕೆಲಸಗಾರರಿಗೆ ಸಾಕಷ್ಟು ನೆರವಾಗಲಿದೆ. ಋತುಸ್ರಾವದ ದಿನದಂದು ಮಹಿಳೆಯರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಾರೆ. ದೈಹಿಕವಾಗಿ ಆಯಾಸ ಸಹ ಉಂಟಾಗುತ್ತದೆ. ಆದರೂ ಬಡ, ಮಧ್ಯಮ ವರ್ಗದ ಮಹಿಳೆಯರು ಆರ್ಥಿಕ ಸಂಕಷ್ಟದ ಕಾರಣಕ್ಕೆ ಆಯಾಸದ ನಡುವೆ ಸಹ ಕೆಲಸಮಾಡುತ್ತಿದ್ದರು. ಇದೀಗ ರಾಜ್ಯ ಸರ್ಕಾರದ ಆದೇಶದಿಂದ ಗಾರ್ಮೆಂಟ್ಸ್, ಐಟಿ ವಲಯ ಸೇರಿದಂತೆ ವಿವಿಧ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಋತುಸ್ರಾವದ ದಿನದಂದು ನೆಮ್ಮದಿಯಿಂದ ಮನೆಯಲ್ಲಿ ಇರಬಹುದಾಗಿದೆ  ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*