ಮನ ಸೆಳೆದ ತೊಗಲು ಬೊಂಬೆಯಾಟ
ಬಳ್ಳಾರಿ: ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡ ವತಿಯಿಂದ ರಾಜ್ತೋತ್ಸವ ಸಂಭ್ರಮದಡಿಯಲ್ಲಿ ಬಳ್ಳಾರಿ ನಗರದ ಗುಗ್ಗರಹಟ್ಟಿಯ ಶ್ರೀ ಶ್ರೀಶೈಲ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ಶಿವದೀಕ್ಷಾ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಚೋರಚೂರು ಕೊಟ್ರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡದ ಮೇಲೆ ಅಭಿಮಾನ ಮೂಡಿಸುವಂತಹದ್ದೇ ಕನ್ನಡ ರಾಜ್ಯೋತ್ಸವ ಆಚರಣೆ. ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ಮೂಲಕ ಕನ್ನಡದ ಪ್ರೇಮ ಮೂಡಿಸಬೇಕು. ನಮ್ಮ ಜೀವನದ ಬದುಕಿಗೆ ಎಲ್ಲ ಭಾಷೆಗಳು ಬೇಕು. ಆದ್ರೆ ನಮ್ಮ ಮಾತೃ ಭಾಷೆ ಕನ್ನಡವನ್ನು ಉಳಿಸಿ ಬೆಳೆಸಬೇಕು. ನಮ್ಮ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ಕೊಡಬೇಕು. ಅಧಿಕಾರದಲ್ಲಿ ಕನ್ನಡ ಭಾಷೆ ಹೆಚ್ಚು ಬಳಕೆ ಆಗಬೇಕು ಎಂದರು.
ಸಂಸ್ಕೃತಿ ಮತ್ತು ಸಂಸ್ಕಾರ ಬಹಳ ಮುಖ್ಯ. ಸಂಗೀತ, ಸಾಹಿತ್ಯ, ಶಿಲ್ಪ ಕಲೆ ಸೇರಿದಂತೆ ಯಾವುದಾದರೂ ಒಂದು ಕಲೆಯಲ್ಲಿ ಮಕ್ಕಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಅಂದಾಗ ಮಾತ್ರ ಮಕ್ಕಳು ಸರ್ವತೋಮುಖ ಅಭಿಯಾಗಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಿ.ರಾಮಚಂದ್ರ ಅವರು ಮಾತನಾಡಿ, ಈ ಹಿಂದೆ ತೊಗಲುಗೊಂಬೆ ಆಡಿಸುವುದು ಬಹಳ ಕಷ್ಟದ ಕೆಲಸ. ಮುಖಕ್ಕೆ ಬಣ್ಣ ಹಾಕಿ ಅಭಿನಯಿಸೋದು ಸುಲಭ. ಪರದೆ ಹಿಂದೆ ನಿಂತು ತೊಗಲುಗೊಂಬೆ ಕುಣಿಸೋದು ಕಷ್ಟದ ಕೆಲಸ. ಆದ್ರೂ ಅಂತಹ ಕಲೆಯನ್ನು ಉಳಿಸಿಕೊಂಡು ಬರುತ್ತಿರುವ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಘನ ಉಪಸ್ಥಿತಿ ಪಾಲಕೆ ಮೇಯರ್ ಪಿ.ಗಾದೆಪ್ಪ, ಮುಖ್ಯ ಅತಿಥಿಗಳಾಗಿ ಶ್ರೀಶೈಲ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ರಾಜಶೇಖರ ಗೌಡ ಉಪಸ್ಥಿತರಿದ್ದರು.
ಸರಳಾದೇವಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಬಿ.ರಾಮಸ್ವಾಮಿ ಅವರು ತೊಗಲುಗಬೆ ಬಗ್ಗೆ ಉಪನ್ಯಾಸ ನೀಡಿದರು.
ಸಂಗೀತ ಗಾಯಕ ಕೆ.ವಸಂತಕುಮಾರ ಅವರಿಂದ ಸುಗಮ ಸಂಗೀತ ನಡೆಯಿತು.
ಬಿ.ಅಮೃತ ಮತ್ತು ತಂಡದಿಂದ ಸಮೂಹ ನೃತ್ಯ ನಡೆಯಿತು.
ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದ ಅಧ್ಯಕ್ಷ ಕೆ. ಹೊನ್ನೂರಸ್ವಾಮಿ ಪ್ರಾಸ್ತವಿಕವಾಗಿ ಮಾತನಾಡಿದರು. ಕು. ನೇಹಾ ಪ್ರಾರ್ಥನಾ ಗೀತೆ ಹಾಡಿದರು.
ಬಿ.ರಾಘವೇಂದ್ರ ಸ್ವಾಗತಿಸಿದರು. ಸಾರಂಗ ಮಠದ ವಿಜಯಾನಂದ ಶಾಸ್ತ್ರಿ, ಎಂ. ಪುರುಷೋತ್ತಮ ಅವರು ಕಾರ್ಯಕ್ರಮ ನಿರೂಪಿಸಿದರು.
ಲಕ್ಷ್ಮೀದೇವಿ ಹೊನ್ನೂರಸ್ವಾಮಿ ವಂದಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ