ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಧಿಕಾರಿಗಳ ಭೇಟಿ
ಮಾನ್ವಿ: ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಧಿಕಾರಿ ಡಾ.ಸುರೇಶಬಾಬು ಭೇಟಿ ನೀಡಿ ಮಾತನಾಡಿ ಆಸ್ಪತ್ರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಬಡಜನರು ಚಿಕಿತ್ಸೆಗಾಗಿ ಬರುತ್ತಾರೆ ಅವರೊಂದಿಗೆ ವೈದ್ಯರು ಹಾಗೂ ವೈದ್ಯಕಿಯೇತರ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ವರ್ತಿಸಬೇಕು ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ನೀಡಬೇಕು. ಸ್ತಿçÃರೋಗ ತಜ್ಞರು ದೊರೆತ ಕೂಡಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ನೇಮಕಮಾಡಲಾಗುವುದು. ಆಸ್ಪತ್ರೆಯ ಸಿಬ್ಬಂದಿಗಳು ಸ್ವಚ್ಚತೆಗೆ ಹೆಚ್ಚಿನ ಅದ್ಯತೆಯನ್ನು ನೀಡಬೇಕು ಆಸ್ಪತ್ರೆಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಕಮಾಡಲಾಗಿದ್ದು ಸ್ತಿçÃರೋಗ ತಜ್ಞ ವೈದ್ಯಾರ ಕೊರತೆಯಿದ್ದು ಕೂಡಲೇ ನೇಮಕಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುವುದು.ಎಂದು ತಿಳಿಸಿದರು. ಆಸ್ಪತ್ರೆಯಲ್ಲಿನ ಹೆರಿಗೆ ಕೋಣೆ, ಮಕ್ಕಳ ವಾರ್ಡ್, ನವಜಾತ ಶಿಶುಗಳ ಆರೈಕೆ ವಾರ್ಡ್, ಗರ್ಭಿಣಿ ಮತ್ತು ಬಾಣಂತಿಯರ ವಾರ್ಡ್ ಸೇರಿದಂತೆ ವಿವಿಧ ವಾರ್ಡ್ಗಳನ್ನು ಪರಿಶೀಲಿಸಿದರು. ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಎಂ.ಎಸ್.ಪಾಟೀಲ್, ಮಕ್ಕಳತಜ್ಞರಾದ ಡಾ.ಶರಣಪ್ಪ, ಡಾ.ಕಾವ್ಯ, ಸೇರಿದಂತೆ ಆರೋಗ್ಯ ಸಿಬ್ಬಂದಿ ಇದ್ದರು.