ಬಳ್ಳಾರಿ ಜಿಲ್ಲೆಯ ಕನ್ನಡದ ಹೊಸ ಕಾವ್ಯ ಪ್ರವರ್ತಕರು ಹಿ.ಮ.ನಾಗಯ್ಯ
ಕೊಟ್ಟೂರು : ಕನ್ನಡ ಸಾಹಿತ್ಯ ಲೋಕದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಮೊದಲಿಗೆ ಹೊಸ ಕಾವ್ಯವನ್ನು ರಚಿಸಿದ್ದ ದಿ.ಹಿ.ಮ.ನಾಗಯ್ಯನವರು ಅಂದಿನ ದಿನಗಳಲ್ಲಿ ಹೊಸ ಕಾವ್ಯದ ಪ್ರವರ್ತಕರಾಗಿ ಹೊರ ಹೊಮ್ಮಿದ್ದರು ಎಂದು ಹೊಸಪೇಟೆಯ ಶಿಕ್ಷಕ ಬಿ.ಎಂ.ರಾಜಶೇಖರ ಹೇಳಿದರು. ಪಟ್ಟಣದ ಶ್ರೀ ರೇಣುಕ ಸಭಾಭವನದಲ್ಲಿ ತಾಲೂಕು ಕ.ಸಾ.ಪ. ಆಯೋಜಿಸಿದ್ದ ದಿ.ಹಿ.ಮ.ನಾಗಯ್ಯನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಶನಿವಾರ ವಿಶೇಷ ಉಪನ್ಯಾಸ ನೀಡಿದರು. ಕೂಡ್ಲಿಗಿ ತಾಲೂಕಿನ ಹಿರೇಕುಂಬಳಕುAಟೆ ಗ್ರಾಮದ ಹಿ.ಮ.ನಾ.ಅವರು, ಕವಿ ಮತ್ತು ಕವಿತೆ ಬೇರೆ ಅಲ್ಲ ಎಂದು ಭಾವಿಸಿದ್ದರಿಂದಲೇ ಅವರ ಸಾಹಿತ್ಯ ಸರಳ ಭಾಷೆಯಲ್ಲಿದೆ. ಪತ್ರಕರ್ತರಾಗಿ, ಸ್ವಂತ ಪತ್ರಿಕೆ ನಡೆಸಿ, ಬೆಂಗಳೂರು ಮಹಾ ನಗರ ಪಾಲಿಕೆ ಸದಸ್ಯರಾಗಿ, ಆಸ್ತಿ ತೆರಿಗೆ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ರಾಮಕೃಷ್ಣ ಹೆಗಡೆಯವರಿಗೆ ಆತ್ಮೀಯರಾಗಿದ್ದ ಅವರಿಗೆ ದೊಡ್ಡ ರಾಜಕೀಯ ನಂಟು ಇದ್ದರೂ ಆಮಿಷಕ್ಕೊಳಗಾಗದೇ ಕೊನೆವರೆಗೂ ಸರಳ ಜೀವನ ನಡೆಸಿದ್ದರು ಎಂದರು. ಬಳ್ಳಾರಿ ಜಿಲ್ಲೆಯಲ್ಲಿ ಕನ್ನಡ ಶಾಲೆಗಳನ್ನು ತೆರೆದು, ಭಾಷೆ ಬೆಳಸಿ ರಾಜ್ಯದಲ್ಲಿಯೇ ಉಳಿಯುವಂತೆ ಮಾಡಿದ ಕೀರ್ತಿ ಹಿರಿಯ ಸಾಹಿತಿ ನಾಗೇಶಶಾಸ್ತಿçಗಳಿಗೆ ಸಲ್ಲುತ್ತದೆ. ಅದರಂತೆ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಕಾವ್ಯ ರಚನೆ ಆರಂಭವಾಗಿದ್ದರೂ ಜಿಲ್ಲೆಯಲ್ಲಿ ಮೊದಲಿಗೆ ಹೊಸ ಕಾವ್ಯ ರಚಿಸಿದ್ದ ಕೀರ್ತಿ ಹಿ.ಮ.ನಾ.ರದ್ದಾಗಿದೆ. ಸ್ವಾತಂತ್ರö್ಯ ಹೋ...